ರೈತರು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು: ಧರ್ಮಸೇನ
ಟಿ. ನರಸೀಪುರ: ರೈತರು ಆರ್ಥಿಕವಾಗಿ ಸದೃಢರಾಗಿ ಕೃಷಿ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಆರ್. ಧರ್ಮಸೇನ ಹೇಳಿದರು. ಪಟ್ಟಣದ ಎಪಿಎಂಸಿ ಆವರಣದಲ್ಲಿ ಶನಿವಾರ ಕೃಷಿ ಉತ್ಸವದಲ್ಲಿ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆ ಉದ್ಘಾಟಿಸಿ ಮಾತನಾಡಿದ ಅವರು, ಕೃಷಿ ಚಟುವಟಿಕೆಗಳಲ್ಲಿ ಆಧುನಿಕ ಪದ್ಧತಿ ಬಳಕೆಯಾಗಬೇಕು. ರೈತರು ಹಂತ ಹಂತವಾಗಿ ತಾಂತ್ರಿಕತೆಯನ್ನು ಅಳವಡಿಸಿಕೊಂಡು ಅಧಿಕ ಇಳುವರಿ ಪಡೆಯಬೇಕು ಎಂದರು.
ಕೃಷಿಯಲ್ಲಿ ಬಳಸಬೇಕಾದ ತಾಂತ್ರಿಕತೆ ಮತ್ತು ಆಧುನಿಕ ಬೇಸಾಯದ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೃಷಿ ಉತ್ಸವ ಹಮ್ಮಿಕೊಳ್ಳಲಾಗಿದೆ. ಹಣ ಉಳಿತಾಯದ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿ, ಹೈನುಗಾರಿಕೆ ಅಭಿವೃದ್ಧಿ ಪಡಿಸುತ್ತಿರುವ ತಾಲೂಕಿಗೆ ಹೆಮ್ಮೆಯ ವಿಷಯ ಎಂದರು. ಬಿಎಸ್ಪಿ ರಾಜ್ಯ ಸಂಚಾಲಕ ಎನ್. ಮಹೇಶ್ ಮಾತನಾಡಿ, ಪ್ರತಿ ವರ್ಷ ದೇಶದಲ್ಲಿ 56 ಸಾವಿರ ಕೋಟಿ ಆಹಾರ ಪದಾರ್ಥ ನಿರುಪಯುಕ್ತಗೊಳ್ಳುತ್ತಿದೆ. ರೈತರು ಪರಿಶ್ರಮದಿಂದ ಉತ್ಪಾದಿಸುವ ಆಹಾರ ಪದಾರ್ಥಗಳನ್ನು ಸಂರಕ್ಷಿಸಿಡುವ ಪ್ರಾಮಾಣಿಕ ಪ್ರಯತ್ನವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡುತ್ತಿಲ್ಲ ಎಂದು ತಿಳಿಸಿದರು.
ಮಹಿಳೆಯರೇ ಮೆರಗು: ಕೃಷಿ ಉತ್ಸವ ಸ್ವ ಸಹಾಯಕ ಸಂಘಟನೆಗಳ ಮಹಿಳೆಯರಿಂದಲೆ ಕಳೆಗಟ್ಟಿತ್ತು. ಎಲ್ಲೆಲ್ಲೂ ಸಮವಸ್ತ್ರ ಧರಿಸಿದ್ದ ಮಹಿಳೆಯರೆ ಕಂಡುಬಂದರು. 25 ಸಾವಿರ ಮಹಿಳಾ ಸದಸ್ಯರ ಸಂಖ್ಯೆಯಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ 2,150 ಸ್ವ ಸಹಾಯ ಸಂಘಗಳು ಕಾರ್ಯ ನಿರ್ವಹಿಸುತ್ತಿವೆ.
ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ಎಪಿಎಂಸಿ ಅಧ್ಯಕ್ಷ ಎಂ. ರಾಜು, ಜಿಪಂ ಸದಸ್ಯೆ ರೇಣುಕಾ ನಾಗರಾಜು, ಜಿಪಂ ಮಾಜಿ ಅಧ್ಯಕ್ಷ ಎಸ್.ಎನ್. ಸಿದ್ದಾರ್ಥ, ಕೃಷಿ ಉತ್ಸವ ಹಾಗೂ ಜಿಲ್ಲಾ ಎಸ್ಟಿ ಕಾಂಗ್ರೆಸ್ ಅಧ್ಯಕ್ಷ ಹೊನ್ನನಾಯ್ಕ, ಗೌರವಾಧ್ಯಕ್ಷ ಶಂಕರ್ಗುರು, ತಾಪಂ ಸದಸ್ಯರಾದ ಗುರುಮೂರ್ತಿ, ಬಸವರಾಜು, ಶಿವಮ್ಮ ಮಹದೇವ, ಭೈರಾಪುರ ಗ್ರಾಪಂ ಅಧ್ಯಕ್ಷೆ ಪದ್ಮಾವೆಂಕಟೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

