ಮೈಸೂರು

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿ

Published On :

ಮೈಸೂರು: ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಶಿಕ್ಷಕ ವೃಂದಕ್ಕೆ ಹಾಗೂ ಪೋಷಕರಿಗೆ ಶಾಸಕ ಜಿ.ಟಿ. ದೇವೇಗೌಡ ಕರೆ ನೀಡಿದರು.
ತಾಲೂಕಿನ ದೊಡ್ಡಕಾನ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸರ್ವಶಿಕ್ಷಣ ಅಭಿಯಾನ ಕಾರ್ಯಕ್ರಮದಡಿ ಎರಡು ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ ಮತ್ತು ಶಾಲಾ ಸಂಚಿತ ನಿಧಿಯಿಂದ ಕುಡಿಯುವ ನೀರಿನ ವ್ಯವಸ್ಥೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಾಲೆಯಲ್ಲಿ ಶೈಕ್ಷಣಿಕ ರಂಗಮಂಟಪ ನಿರ್ಮಾಣ ಮಾಡಿಸಿಕೊಡುವುದಾಗಿ ತಿಳಿಸಿ, ಶಾಲಾ ಕಾರ್ಯಕ್ರಮಕ್ಕೆ ಗ್ರಾಮದ ಮುಖಂಡರು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಜಿಪಂ ಸದಸ್ಯ ಪಟೇಲ್ ಜವರೇಗೌಡ ಶಾಲೆಯು ತಾಲೂಕಿನಲ್ಲಿ ಮಾದರಿ ಶಾಲೆಯಾಗಬೇಕೆಂದು ಶುಭ ಹಾರೈಸಿದರು. ಇದೇ ವೇಳೆ ಶಾಲೆಗೆ ಸ್ಥಳದಾನ ಮಾಡಿದ ಹಾಗೂ ಶಾಲಾ ಕೊಠಡಿ ನಿರ್ಮಾಣಕ್ಕೆ ಸಹಕಾರ ನೀಡಲು ಸ್ವಪ್ರೇರಣೆಯಿಂದ ಮುಂದಾದ ಗ್ರಾಮದ ಹಿರಿಯ ಬಸಪ್ಪ ಅವರನ್ನು ಅಭಿನಂದಿಸಲಾಯಿತು. ಶಾಲೆಗೆ ವಿವಿಧ ಉಪಕರಣಗಳನ್ನು ದಾನ ಮಾಡಿದ ಶಿವನಂಜು, ನಂಜಪ್ಪ, ಮಹದೇವಪ್ಪ, ಮಂಜುನಾಥೇಶ್ವರ ರೈತರ ಸ್ವಸಹಾಯ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು.
ಶಾಲೆಯಿಂದ ವರ್ಗಾವಣೆಗೊಂಡ ರೋಹಿಣಿಕುಮಾರಿ ಹಾಗೂ 2013-14ನೇ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿಯಾಗಿ ಆಯ್ಕೆಯಾದ ಪೃಥ್ವಿಯನ್ನು ಅಭಿನಂದಿಸಲಾಯಿತು.
ಜಿಪಂ ಅಧ್ಯಕ್ಷ ಎಂ. ಮಹದೇವು, ತಾಪಂ ಸದಸ್ಯ ಸಿದ್ದರಾಜು, ಗ್ರಾಪಂ ಅಧ್ಯಕ್ಷೆ ನಾಗಣ್ಣ, ಗ್ರಾಪಂ ಸದಸ್ಯ ವಿನೋದ್‌ಕುಮಾರ್, ಮಂಜು ನಾಥ್, ನಂಜುಂಡಸ್ವಾಮಿ, ದಾಕ್ಷಾಯಿಣಿ, ಸುಂದ್ರಮ್ಮ, ಮಂಗಳಮ್ಮ, ದೇವರಾಜಪ್ಪ, ವಿವಿಧ ಸಂಘಟನೆಗಳ ಅಧ್ಯಕ್ಷರು, ಸದಸ್ಯರು, ಶಿಕ್ಷಕರು, ಮುಖಂಡರು ಭಾಗವಹಿಸಿದ್ದರು.
ಮುಖ್ಯ ಶಿಕ್ಷಕ ಜಿ.ವಿ. ನಾಗೇಶ್ ಸ್ವಾಗತಿಸಿದರು. ಸಹ ಶಿಕ್ಷಕ ಮಹೇಶ್ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.