ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ
ಮೈಸೂರು: ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದ ಮೈಸೂರಿನ ಪತ್ರಕರ್ತರಾದ ಕೆ. ಶಿವಕುಮಾರ್, ಎಂ.ಎಸ್. ರಾಜೇಂದ್ರಕುಮಾರ್, ಪ್ರಗತಿ ಗೋಪಾಲಕೃಷ್ಣ, ಕೊಳ್ಳೇಗಾಲ ಮಹೇಶ್ ಅವರನ್ನು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಬುಧವಾರ ಸನ್ಮಾನಿಸಲಾಯಿತು.
ತ್ಯಾಗರಾಜ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಡಿ. ಮಹಾದೇವಪ್ಪ, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಅಂಶಿ ಪ್ರಸನ್ನಕುಮಾರ್, ಅಮೋಘ್ ವಾಹಿನಿಯ ಮುಖ್ಯಸ್ಥ ಬಿಳಿಗಿರಿ ರಂಗನಾಥ್ ಅವರು ಪುರಸ್ಕೃತರನ್ನು ಆತ್ಮೀಯವಾಗಿ ಅಭಿನಂದಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕೆ. ಶಿವಕುಮಾರ್, ಪತ್ರಿಕೋದ್ಯಮದಲ್ಲಿ ಯುವ ಪತ್ರಕರ್ತರ ಬೆಳೆಸುವ ನಿಟ್ಟಿನಲ್ಲಿ ಮಾಧ್ಯಮ ಅಕಾಡೆಮಿಯಿಂದ ಫೆಲೋಶಿಪ್ ರೂಪಿಸಬೇಕಾಗಿದೆ. ವರ್ಷಕ್ಕೆ ಇಂತಿಷ್ಟು ಯೋಜನೆ ರೂಪಿಸಿ ಪ್ರತಿ ಜಿಲ್ಲೆಗೆ ಇಬ್ಬರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ 1 ಲಕ್ಷ ವೆಚ್ಚದ ಯೋಜನೆ ಅಥವಾ ವಿದ್ಯಾರ್ಥಿ ವೇತನ ನೀಡಬಹುದು. ಅವರು ಸಂಶೋಧನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದರೆ ಉಪಯೋಗವಾಗಲಿದೆ ಎಂದರು.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ. ಮಹೇಂದ್ರ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಕೆ. ದೀಪಕ್ ಸ್ವಾಗತಿಸಿದರು. ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ ನಿರೂಪಿಸಿದರು. ಗ್ರಾಮಾಂತರ ಉಪಾಧ್ಯಕ್ಷ ಭೇರ್ಯ ಮಹೇಶ್, ಕಾರ್ಯಕಾರಿ ಸಮಿತಿ ಸದಸ್ಯ ವಾಟಾಳ್ ಆನಂದ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

