ಸಾರ್ವಜನಿಕ ಸ್ಥಳದಲ್ಲಿ ಮನೆಗಳ ನಿರ್ಮಾಣಕ್ಕೆ ಅಡಿಪಾಯ
ಕೆ.ಆರ್. ನಗರ: ಸಾರ್ವಜನಿಕ ಉದ್ದೇಶಕ್ಕೆ ಮೀಸಲಾಗಿಟ್ಟಿದ್ದ ಸ್ಥಳವನ್ನು ನಿವೇಶನಗಳನ್ನಾಗಿ ಹಂಚಿ ಸರ್ಕಾರದ ನಿಯಮ ಉಲ್ಲಂಘಿಸಿರುವ ಪ್ರಕರಣ ಪಟ್ಟಣದಲ್ಲಿ ನಡೆದಿದ್ದು, ಜಿಲ್ಲಾಡಳಿತ ಈವರೆಗೂ ಯಾವುದೆ ಕ್ರಮ ಕೈಗೊಳ್ಳದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಪುರಸಭಾ ವ್ಯಾಪ್ತಿಯ ವಿನಾಯಕ ಬಡಾವಣೆಯಲ್ಲಿ 1988ರಲ್ಲಿ ಅಂದಿನ ಪುರಸಭಾ ಮುಖ್ಯಾಧಿಕಾರಿಯಾಗಿದ್ದ ಪಿ.ಸಿ. ಜಯಣ್ಣ ಸ.ನಂ. 23ರಲ್ಲಿ ಸುಮಾರು 10 ಗುಂಟೆ ಸ್ಥಳವನ್ನು ಸಾರ್ವಜನಿಕರ ಉಪಯೋಗಕ್ಕೆ ಮೀಸಲಿರಿಸಿದ್ದರು. ಆದರೆ ಬಳಿಕ ಆ ಜಾಗವನ್ನು 1992ರಲ್ಲಿ ನಿವೇಶನವಾಗಿ ಪರಿವರ್ತಿಸಿ ಹಕ್ಕು ಪತ್ರ ನೀಡಲಾಗಿದೆ. ಈಗ ಅಲ್ಲಿ ಮನೆ ನಿರ್ಮಾಣ ಕಾರ್ಯ ಆರಂಭವಾಗಿದ್ದು, ಸ್ಥಳೀಯರು ಪುರಸಭಾ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿ ಸಾರ್ವಜನಿಕ ಸ್ಥಳವನ್ನು ಉಳಿಸಬೇಕು ಎಂದು ಮನವಿ ಮಾಡಿದ್ದಾರೆ.
ಬಡಾವಣೆಯ ಹಿರಿಯ ನಾಗರಿಕ ನಾಗೇಂದ್ರರಾವ್ ಎಂಬವರು ಜಿಲ್ಲಾಧಿಕಾರಿ, ಸಂಬಂಧಿಸಿದ ಇಲಾಖೆ ಮತ್ತು ಶಾಸಕರಿಗೆ ದೂರು ನೀಡಿ ಸಾರ್ವಜನಿಕ ಉದ್ದೇಶಕ್ಕೆ ಮೀಸಲಾದ ಜಾಗವನ್ನು ಉಳಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಕ್ಕು ಕಾಯ್ದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರೂ ಪುರಸಭೆ ಮುಖ್ಯಾಧಿಕಾರಿಗಳು ಯಾವುದೆ ಮಾಹಿತಿ ನೀಡಿಲ್ಲ. ಆದ್ದರಿಂದ ಈ ಬಗ್ಗೆ ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ.
ವಾರ್ಡಿನ ನಾಗರಿಕರು ಫೆ.24ರಂದು ಪ್ರಕರಣದ ತನಿಖೆ ನಡೆಸುವಂತೆ ಲೋಕಾಯುಕ್ತ ಕಚೇರಿಗೆ ದಾಖಲೆ ಸಹಿತ ದೂರು ನೀಡಿದ್ದಾರೆ. (ದೂರು ಸಂಖ್ಯೆ- 6223/4). ಈ ಸ್ಥಳವನ್ನು ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಡುವಂತೆ ನಗರ ಯೋಜನಾ ಪ್ರಾಧಿಕಾರ ಆದೇಶ ಹೊರಡಿಸಿದ್ದರೂ ನಿಯಮ ಬಾಹಿರವಾಗಿ ನಿವೇಶನ ನೀಡಿರುವುದು ಸರ್ಕಾರದ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ಈಗಲಾದರೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕ ಉದ್ದೇಶಕ್ಕೆ ಮೀಸಲಿರಿಸಿರುವ ಜಾಗವನ್ನು ಉಳಿಸುವ ಜೊತೆಗೆ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಾಗೇಂದ್ರರಾವ್ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

