ವಾಹನಗಳ ಮಾಹಿತಿ ನೀಡಲು ಸೂಚನೆ
ಮೈಸೂರು: ನಗರ ಮತ್ತು ಜಿಲ್ಲಾ ವ್ಯಾಪ್ತಿಯ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಕಚೇರಿಗಳಲ್ಲಿ ವಾರ್ಷಿಕ ಅಥವಾ ಮಾಸಿಕ ಬಾಡಿಗೆ ಆಧಾರದ ಮೇಲೆ ವಾಹನ ಬಳಸುತ್ತಿದ್ದರೆ ಮತ್ತು ಹೊಸದಾಗಿ ಪಡೆದ ವಾಹನಗಳ ಬಗ್ಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸಿ. ಶಿಖಾ ಸೂಚಿಸಿದ್ದಾರೆ.
ಬಾಡಿಗೆ ಆಧಾರದ ಮೇಲೆ ಬಳಸುತ್ತಿರುವ (ಹಳದಿ ಮತ್ತು ಬಿಳಿ ಫಲಕ) ವಾಹನಗಳ ಮತ್ತು ಪ್ರಸ್ತುತ ಇರುವ ಸರ್ಕಾರಿ ವಾಹನಗಳ ಸಂಪೂರ್ಣ ಮಾಹಿತಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಅಥವಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು (ಪೂರ್ವ ಮತ್ತು ಪಶ್ಚಿಮ) ಮತ್ತು ಹುಣಸೂರಿನ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ 10 ದಿನಗಳ ಒಳಗಾಗಿ ಖುದ್ದಾಗಿ ಅಥವಾ ಇ- ಮೇಲ್ ಮೂಲಕ ತಲುಪಿಸಬೇಕು. ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಅಂಥ ವಾಹನಗಳ ಮಾಹಿತಿ ಸಂಗ್ರಹಿಸುವುದಲ್ಲದೆ, ಅಂಥ ವಾಹನಗಳನ್ನು ತಡೆದು ತಪಾಸಣೆ ನಡೆಸಿ, ಆ ವಾಹನಗಳು ಯಾವ ಕಚೇರಿ, ಇಲಾಖೆಗೆ ಸೇರಿದೆ ವಾಹನದ ನೋಂದಣಿ ಸಂಖ್ಯೆ, ಮಾದರಿ ಮತ್ತು ವಾಹನದ ಮಾಲೀಕರ ವಿವರ ಇತ್ಯಾದಿಗಳನ್ನು ಪಡೆಯಬೇಕು. ಇದಕ್ಕೆ ಸಹಕರಿಸದ ಕಚೇರಿ ಮುಖ್ಯಸ್ಥರು, ವಾಹನದ ಮಾಲೀಕರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಚುನಾವಣಾ ಕಾರ್ಯದ ಬಗ್ಗೆ ನಿಗಾ ವಹಿಸಲು ಸೂಚನೆ
ಲೋಕಸಭಾ ಸಾರ್ವತ್ರಿಕ ಚುನಾವಣಾ ಕಾರ್ಯಗಳಿಗೆ ನೇಮಕ ಮಾಡಿರುವ ನೋಡೆಲ್ ಅಧಿಕಾರಿಗಳು ಚುನಾವಣಾ ಕಾರ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಶಿಖಾ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈಗಾಗಲೆ ರಚಿಸಿರುವ 14 ವಿವಿಧ ಸಮಿತಿಯ ನೋಡೆಲ್ ಅಧಿಕಾರಿಗಳ ಸಭೆ ಕರೆದು ಕಾರ್ಯನಿರ್ವಹಣೆಯ ಬಗ್ಗೆ ಚರ್ಚಿಸಿ ಚುನಾವಣೆಯ ಜವಾಬ್ದಾರಿ ವಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

