ಮೈಸೂರು

ಶಿಸ್ತು ಇಲ್ಲದಿದ್ದಲ್ಲಿ ಸಾಧನೆ ಅಸಾಧ್ಯ: ಕೆ.ಬಿ. ಗಣಪತಿ

Published On :

ಸುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಇಲ್ಲದಿದ್ದರೆ ಏನನ್ನೂ ಸಾಧಿಸಲಾಗದು ಎಂದು ಪತ್ರಿಕೋದ್ಯಮಿ ಕೆ.ಬಿ. ಗಣಪತಿ ಹೇಳಿದರು.
ಸುತ್ತೂರು ಶ್ರೀಕ್ಷೇತ್ರದ ಜೆಎಸ್‌ಎಸ್ ವಸತಿ ಶಾಲೆಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಶಿಸ್ತು ಸಾಮಾನ್ಯವಾಗಿ ಮನೆಯಿಂದಲೇ ಆರಂಭವಾಗುತ್ತದೆ. ಆದರೆ ಇಲ್ಲಿನ ವಿದ್ಯಾರ್ಥಿಗಳ ಶಿಸ್ತು ಹಾಸ್ಟೆಲ್‌ನಿಂದ ಆರಂಭವಾಗುತ್ತದೆ ಎಂದರು.
ಶಿಕ್ಷಕರು ಹೇಳಿದ ಮಾತುಗಳನ್ನು ಕೇಳುವುದು ಹಾಗೂ ಗುರು-ಹಿರಿಯರನ್ನು ಗೌರವಿಸುವುದರಿಂದ ವಿದ್ಯಾರ್ಥಿಗಳ ಮುಂದಿನ ಮಾರ್ಗ ಸುಗಮವಾಗುತ್ತದೆ. ವಿದ್ಯಾಭ್ಯಾಸದಲ್ಲಿ ಬದ್ಧತೆ ಇರಬೇಕು. ಸತತ ಅಭ್ಯಾಸದಿಂದ ಗುರಿ ಮುಟ್ಟಲು ಸಾಧ್ಯ. ವಿದ್ಯಾರ್ಥಿಗಳಿಗೆ ಎಲ್ಲ ಸೌಲಭ್ಯಗಳನ್ನು ಒದಗಿಸಿರುವ ಸುತ್ತೂರು ಶ್ರೀಮಠದ ಪ್ರಯೋಜನ ಪಡೆದುಕೊಂಡು ಜೀವನದಲ್ಲಿ ಮುಂದೆ ಬರುವುದಷ್ಟೇ ಅಲ್ಲ, ಸಮಾಜದ ಋಣವನ್ನು ತೀರಿಸುವ ಮಟ್ಟಕ್ಕೆ ಬಳೆಯಬೇಕು ಎಂದರು.
ವಾರ್ತಾ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ವಿಜಯಕುಮಾರ್ ಮಾತನಾಡಿ, ವಿದ್ಯಾರ್ಥಿಗಳು ವಯಸ್ಸು ಚಿಕ್ಕದಾದರೂ ದೊಡ್ಡ ಭವಿಷ್ಯವನ್ನು ರೂಪಿಸಿಕೊಳ್ಳಬೇಕಾದ ಜವಾಬ್ದಾರಿ ಇದೆ. ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕಾದ ಅವಶ್ಯಕತೆ ಇದೆ. ಏಕೆಂದರೆ ದೇಶವನ್ನು ಕಟ್ಟಬೇಕಾಗಿರುವುದು ಮನಸ್ಸುಗಳಿಂದಲೇ ಹೊರತು ಇಟ್ಟಿಗೆ, ಗಾರೆಗಳಿಂದಲ್ಲ. ದೇಶ ಸರಿಯಿಲ್ಲ ಎನ್ನುವ ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು.
ದೇವಮ್ಮ ಗಣಪತಿ, ಶಶಿಕಲಾ ವಿಜಯಕುಮಾರ್, ವಿಜಯ ಬ್ಯಾಂಕ್ ನಿವೃತ್ತ ಹಿರಿಯ ವ್ಯವಸ್ಥಾಪಕ  ಪುಟ್ಟಸ್ವಾಮಿ, ಮೀನಾ ಪುಟ್ಟಸ್ವಾಮಿ, ಜೆಎಸ್‌ಎಸ್ ಮಹಾವಿದ್ಯಾಪೀಠದ ಸಾಮಾನ್ಯ ಅಭಿವೃದ್ಧಿ ವಿಭಾಗದ ಆಡಳಿತಾಧಿಕಾರಿ ಕೆ.ಎಂ. ನಾಗಣ್ಣಚಾರ್, ಸುತ್ತೂರು ಜೆಎಸ್‌ಎಸ್ ಸಂಸ್ಥೆಗಳ ಆಡಳಿತಾಧಿಕಾರಿ ಎಸ್.ಪಿ. ಉದಯಶಂಕರ್ ಇದ್ದರು. ಜೆಎಸ್‌ಎಸ್ ಸಂಸ್ಥೆಗಳ ಸಂಯೋಜನಾಧಿಕಾರಿ ಜಿ.ಎಲ್. ತ್ರಿಪುರಾಂತಕ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.