'ಮತ ಚಲಾಯಿಸಿ, ಪ್ರಜಾಪ್ರಭುತ್ವ ಗಟ್ಟಿಗೊಳಿಸಿ'
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಎಲ್ಲ ಮತದಾರರು ಮತ ಚಲಾಯಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು ಎಂದು ಜಿಪಂ ಸಿಇಒ ಪಿ.ಎ.ಗೋಪಾಲ್ ತಿಳಿಸಿದರು.
ಜಿಪಂ ಸಭಾಂಗಣದಲ್ಲಿ ಗುರುವಾರ ಮತದಾರರ ಜಾಗೃತಿ ಹಾಗೂ ಸಹಭಾಗಿತ್ವ ಸಮಿತಿಯ ಕಾರ್ಯ ನಿರ್ವಹಣೆ ಕುರಿತು ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿ, ಮತದಾನದ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ, ಸೈಕಲ್ ಜಾಥಾ, ಮಾನವ ಸರಪಳಿ, ಸಹಿ ಆಂದೋಲನ, ಕರಪತ್ರ ವಿತರಣೆ, ಭಿತ್ತಿಪತ್ರ, ಪ್ರದರ್ಶನ ಫಲಕಗಳ ಮೂಲಕ ಪ್ರಚಾರ ಹಾಗೂ ಇತರ ವಿನೂತನ ಕಾರ್ಯಕ್ರಮ ಕೈಗೊಳ್ಳಬೇಕಿದೆ ಎಂದರು.
ಶಾಲಾ, ಕಾಲೇಜು ವಿದ್ಯಾರ್ಥಿಗಳಿಂದ ಜಾಥಾ ನಡೆಸುವುದು ನಿರ್ಬಂಧ. ಭಾಷಣ ಸ್ಪರ್ಧೆಗಳನ್ನು ಏರ್ಪಡಿಸುವುದು, ಮಕ್ಕಳಿಂದ ಪೋಷಕರಿಗೆ ಮತದಾನದ ಅರಿವು ಮೂಡಿಸುವುದು, ಕಾಲೇಜು ವಿದ್ಯಾರ್ಥಿಗಳಿಗೆ ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯವರು ತಮ್ಮ ವ್ಯಾಪ್ತಿಯ ಎಲ್ಲ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಸಂದೇಶ ರವಾನಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯವರು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ ಕಾರ್ಮಿಕ ಮುಖಂಡರ ಸಭೆ ಕರೆದು ಕಾರ್ಮಿಕರಿಗೆ ವಿಶೇಷ ಉಪನ್ಯಾಸ ಏರ್ಪಡಿಸಬೇಕು. ಕರಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ವಿವರವನ್ನು ಮಾ. 9ರಂದು ಎಲ್ಲ ಮತಗಟ್ಟೆಗಳಲ್ಲಿ ಪ್ರದರ್ಶಿಸುವ ವಿಶೇಷ ಶಿಬಿರ ಏರ್ಪಡಿಸಲಾಗುತ್ತಿದೆ. ಮತದಾರರು ಮತಗಟ್ಟೆಗಳಿಗೆ ಭೇಟಿ ನೀಡಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವ ಬಗ್ಗೆ ಖಾತರಿ ಪಡಿಸಿಕೊಳ್ಳಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮಾ. 8ರಂದು ಜಿಲ್ಲೆಯಲ್ಲಿ ಬೃಹತ್ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

