ಮೈಸೂರು

ಪೌರ ಕಾರ್ಮಿಕರ ಗುತ್ತಿಗೆ ರದ್ದತಿಗೆ ಆಗ್ರಹ

Published On :

ಮೈಸೂರು: ಮೈಸೂರು ನಗರ ಪಾಲಿಕೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸದಿದ್ದರೆ ಪ್ರತಿಭಟಿಸುವುದಾಗಿ ನಗರ ಪಾಲಿಕೆ ಗುತ್ತಿಗೆ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಹರೀಶ್‌ರಾಜ್ ಎಚ್ಚರಿಸಿದ್ದಾರೆ.
ನಗರ ಪಾಲಿಕೆಯಲ್ಲಿ ಸುಮಾರು 2400 ಮಂದಿ ಪೌರ ಕಾರ್ಮಿಕರು ಗುತ್ತಿಗೆ ಪದ್ಧತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರ ಗುತ್ತಿಗೆ ಪದ್ಧತಿಯನ್ನು ರದ್ದುಗೊಳಿಸಿ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು. ಪಾಲಿಕೆಯಲ್ಲಿ ಸ್ವಚ್ಛತಾ ಕೆಲಸವನ್ನು ಖಾಸಗಿಯವರಿಗೆ ಗುತ್ತಿಗೆ ನೀಡಿರುವ ಪ್ರಕಾರ 1998 ಹಾಗೂ 99ನೇ ಸಾಲಿನಿಂದ 15 ವರ್ಷ ಗುತ್ತಿಗೆ ಪಡೆದ ಮಾಲೀಕರು ಗುತ್ತಿಗೆ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಇಎಸ್‌ಐ ಹಾಗೂ ಪಿಎಫ್ ಹಣ ಗುತ್ತಿಗೆ ಪೌರ ಕಾರ್ಮಿಕರ ಖಾತೆಗೆ ಜಮಾವಾಗುತ್ತಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಪೌರ ಕಾರ್ಮಿಕರ ಪಿಎಫ್ ಮತ್ತು ಇಎಸ್‌ಐ ಹಣ ಜಮಾಗೊಳಿಸದೆ ಹಗಲು ದರೋಡೆ ಮಾಡುತ್ತಿದ್ದಾರೆ. ಅವರ ಖಾತೆಗೆ ಕೂಡಲೇ ಹಣ ಜಮಾ ಮಾಡಬೇಕು. ಕಾರ್ಮಿಕರಿಗೆ ಸುಮಾರು 13 ಕೋಟಿಯನ್ನು ಪಾಲಿಕೆ ವತಿಯಿಂದ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಹಾಗೂ ಮಾಲೀಕರು ವೆಚ್ಚ ಮಾಡಿದ್ದಾರೆ. ಆದ್ದರಿಂದ ಈ ಬಗ್ಗೆ ಲೋಕಾಯುಕ್ತ ತನಿಖೆ ನಡೆಸಬೇಕು ಹಾಗೂ ಆರೋಗ್ಯಾಧಿಕಾರಿ ನಾಗರಾಜ್ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಅಲ್ಲದೆ ತಪ್ಪಿತಸ್ಥರನ್ನು ಕೆಲಸದಿಂದ ವಜಾಗೊಳಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಪೌರ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸ ವೆಚ್ಚವನ್ನು ಉನ್ನತ ಶಿಕ್ಷಣ ಪಡೆಯುವವರೆಗೂ ಪಾಲಿಕೆಯೇ ಭರಿಸಬೇಕು. ಮನೆ ಮನೆ ಕಸ ತೆಗೆಯುವ ಗುತ್ತಿಗೆ ಪೌರ ಕಾರ್ಮಿಕರನ್ನು ರದ್ದುಗೊಳಿಸಬೇಕು. ಪಾಲಿಕೆಯ ಆರೋಗ್ಯ ಶಾಖೆಯಲ್ಲಿ 37 ಜನ ಪೌರ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಓಓಡಿ ರದ್ದುಪಡಿಸಿ ನಿರ್ಮೂಲನ ದಾಫ್ಟರಾಗಿ ಆದೇಶಿಸಬೇಕು. ಈ ಎಲ್ಲಾ ಬೇಡಿಕೆಗಳನ್ನು ಒಂದು ತಿಂಗಳ ಒಳಗಾಗಿ ಈಡೇರಿಸದಿದ್ದರೆ ಪ್ರತಿಭಟಿಸುವುದಾಗಿ ಎಚ್ಚರಿಸಿದರು.
ಸಂಘದ ಉಪಾಧ್ಯಕ್ಷ ಎಂ. ರಾಮಚಂದ್ರ, ಕಾರ್ಯದರ್ಶಿ ಮುರುಗ, ಎಂ. ಚಂದ್ರಶೇಖರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.