ಮೈಸೂರು

ತನಿಖೆ ಹೊಣೆ ಸಿಪಿಐಗೆ

Published On :

ಮೈಸೂರು: ಎಸ್‌ಐ ಸೇರಿದಂತೆ ನಾಲ್ವರು ಪೊಲೀಸರ ವಿರುದ್ಧ ಮೈಸೂರು ತಾಲೂಕಿನ ಇಲವಾಲ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ಬಗ್ಗೆ ಮೈಸೂರು ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್ ಸದಾನಂದ ತಿಪ್ಪಣ್ಣನವರ್ ತನಿಖೆ ನಡೆಸುತ್ತಿದ್ದಾರೆ ಎಂದು ಎಸ್ಪಿ ಅಭಿನವ್ ಅಶೋಕ್ ಖರೆ ತಿಳಿಸಿದರು. ಕೇರಳದ ಚಿನ್ನದ ವ್ಯಾಪಾರಿ ನೀಡಿರುವ ದೂರಿನನ್ವಯ ಎಸ್‌ಐ ಜಗದೀಶ್, ಪೇದೆಗಳಾದ ಸತೀಶ್, ಅಶೋಕ್ ಮತ್ತು ಲತೀಫ್ ವಿರುದ್ಧ ಇಲವಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ. ಎಸ್‌ಐ ಸೇರಿದಂತೆ ನಾಲ್ಕು ಮಂದಿ ಆರೋಪಿಗಳು ತಲೆಮರೆಸಿಕೊಂಡಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಅವರು ಹೇಳಿದರು.

ಪಾಳು ಬಾವಿಗೆ ಕರಡಿ ಬಿದ್ದು ಸಾವು
ಗುಂಡ್ಲುಪೇಟೆ: ಪಾಳು ಬಾವಿಗೆ ಕರಡಿಯೊಂದು ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಹೊರೆಯಾಲ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸುಮಾರು 15 ವರ್ಷದ ಗಂಡು ಕರಡಿ ಆಹಾರ ಅರಸಿ ಬಂದಾಗ ನೀರಿಲ್ಲದ ಪಾಳು ಬಾವಿಗೆ ಆಯತಪ್ಪಿ ಜಾರಿ ಬಿದ್ದು ಪ್ರಾಣ ಕಳೆದುಕೊಂಡಿದೆ ಎಂದು ಓಂಕಾರ ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶಕುಮಾರ್ ತಿಳಿಸಿದ್ದಾರೆ. ಹೊರೆಯಾಲ ಗ್ರಾಮದ ಪಶ್ಚಿಮಕ್ಕಿರುವ ಪುಟ್ಟರಾಜು ಎಂಬವರಿಗೆ ಸೇರಿದ ಪಾಳು ಬಾವಿಯಲ್ಲಿ ಕರಡಿ ಮೂರು ದಿನದ ಹಿಂದೆ ಬಾವಿಗೆ ಬಿದ್ದಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಪಾಳು ಬಾವಿಯಲ್ಲಿ ಜೇನು ಕಟ್ಟಿತ್ತು. ಜೇನಿನ ವಾಸನೆಯಿಂದ ಕರಡಿ ಬಾವಿಯ ಬಳಿಗೆ ಬಂದಾಗ ಆಯತಪ್ಪಿ ಕೆಳಗೆ ಬಿದ್ದಿದೆ. ಬಿದ್ದ ರಭಸಕ್ಕೆ ತಲೆಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿರುವುದು ಶವ ಪರೀಕ್ಷೆ ಸಮಯದಲ್ಲಿ ಕಂಡು ಬಂದಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.