ಮಾಲಿಕುಲರ್ ಸ್ಪೆಕ್ಟ್ರೊಸ್ಕೋಪಿ ಕುರಿತು ವಿಚಾರ ಸಂಕಿರಣ
ನಂಜನಗೂಡು: ನಂಜನಗೂಡಿನ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಮಾಲಿಕುಲರ್ ಸ್ಪೆಕ್ಟ್ರೊಸ್ಕೋಪಿ ಕುರಿತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿತ್ತು.
ಜೆಎಸ್ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ. ಟಿ.ಡಿ. ಸುಬ್ಬಣ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ನಂಜನಗೂಡಿನ ಈ ಸಂಸ್ಥೆಯಲ್ಲಿ ಅಣು ರೋಹಿತ ತತ್ವಗಳ ಕುರಿತು ಈ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಿರುವುದು ಶ್ಲಾಘನೀಯ ಎಂದರು. ಮೈಸೂರು ವಿವಿ ಕುಲಪತಿ ಪ್ರೊ. ಕೆ.ಎಸ್. ರಂಗಪ್ಪ ಅವರ ಸಂದೇಶವನ್ನು ವಿಚಾರ ಸಂಕಿರಣದ ಸಂಘಟನಾ ಕಾರ್ಯದರ್ಶಿ ಡಾ. ಎಂ. ಮಂಜುಳಾ ವಾಚಿಸಿದರು. 53 ಮಂದಿ ಶಿಕ್ಷಕರು ಸೇರಿ 275 ಮಂದಿ ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು. ನಿವೃತ್ತ ಪ್ರಾಧ್ಯಾಪಕ ನಾಗರಾಜ ಶಾಸ್ತ್ರಿ ಇದ್ದರು. ಪ್ರಾಂಶುಪಾಲ ಪ್ರೊ. ಕೆ. ರಾಮಮೂರ್ತಿರಾವ್ ಸ್ವಾಗತಿಸಿದರು.
ಕಾಂಗ್ರೆಸ್ ಸಾಧನೆ ಮನವರಿಕೆಗೆ ಪಾದಯಾತ್ರೆ
ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಮಾ.10ರಂದು ನಗರದಲ್ಲಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9ಕ್ಕೆ ಕೆ.ಆರ್. ಕ್ಷೇತ್ರದ ವಿದ್ಯಾರಣ್ಯಪುರಂನ ಚಾಮುಂಡಿವನದಿಂದ ಪಾದಯಾತ್ರೆ ಹೊರಡಲಿದ್ದು, ಶಾಸಕ ಎಂ.ಕೆ. ಸೋಮಶೇಖರ್ ನೇತೃತ್ವ ವಹಿಸುವರು. ಮಾ.11ರ ಬೆಳಗ್ಗೆ 11.30ಕ್ಕೆ ಚಾಮರಾಜ ಕ್ಷೇತ್ರದ ಆಲಮ್ಮ ಛತ್ರದಿಂದ ಪಾದಯಾತ್ರೆ ಹೊರಡಲಿದ್ದು, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮಶ್ವರ್, ಶಾಸಕ ವಾಸು ಭಾಗವಹಿಸುವರು. ಈ ಎರಡು ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸುವಂತೆ ಕಾಂಗ್ರೆಸ್ ನಗರಾಧ್ಯಕ್ಷ ಸಿ. ದಾಸೇಗೌಡ ಭಾನುವಾರ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮನವಿ ಮಾಡಿದರು. ಶಾಸಕ ವಾಸು ಮಾತನಾಡಿ, ಮೈಸೂರು- ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಚ್. ವಿಶ್ವನಾಥ್ ಸ್ಪರ್ಧಿಸಲಿದ್ದು, ಕಾರ್ಯಕರ್ತರು ಹಿಂದೆಂದಿಗಿಂತ ಹೆಚ್ಚು ಶ್ರಮ ಹಾಕಿ ಅವರ ಗೆಲವಿಗೆ ದುಡಿಯಬೇಕು. ಎಲ್ಲರೂ ವೈಯಕ್ತಿ ಕೆಲಸಗಳನ್ನು ಬದಿಗೊತ್ತಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಕಾರಣಕರ್ತರಾಗುವಂತೆ ಕೋರಿದರು. ಆರ್. ರಘು, ಮಾಜಿ ಮೇಯರ್ ಬಿ.ಕೆ. ಪ್ರಕಾಶ್, ದಕ್ಷಿಣಾಮೂರ್ತಿ, ಪಾಲಿಕೆ ಪ್ರತಿಪಕ್ಷ ನಾಯಕ ನಾಗಭೂಷಣ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

