ರೋಗಿಗಳ ಸೇವೆಗೆ ಆರೈಕೆಇರಲಿ: ಡಾ. ಪುಟ್ಟಸ್ವಾಮಿ
ಮೈಸೂರು: ಯಾವುದೇ ರೋಗಿಗಳ ಸೇವೆಗೆ ಉತ್ತಮ ಆರೈಕೆಯು ಬಹುಮುಖ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಟಿ. ಪುಟ್ಟಸ್ವಾಮಿ ಹೇಳಿದರು.
ಜೆಎಸ್ಎಸ್ ನರ್ಸಿಂಗ್ ಕಾಲೇಜು ವತಿಯಿಂದ ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮರ್ಪಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ರೋಗಿಗಳು ಗುಣಮುಖರಾಗಲು ಕೇವಲ ಔಷಧೋಪಚಾರ ನಡೆಸಿದರೆ ಸಾಲದು. ಇದರ ಜತೆಗೆ ನಗು ಮುಖದ ಸೇವೆ ನೀಡುವ ಮೂಲಕ ಉತ್ತಮ ಆರೈಕೆ ಮಾಡಿದಾಗ ಅವರ ಕಾಯಿಲೆ ಅರ್ಧಭಾಗ ನಿವಾರಣೆಯಾಗಲಿದೆ. ಈ ದಿಸೆಯಲ್ಲಿ ರೋಗಿಗಳನ್ನು ದೇವರೆಂದು ಉಪಚರಿಸುವ ಅಗತ್ಯವಿದೆ ಎಂದರು.
ಪ್ರತಿಯೊಬ್ಬ ಶುಶ್ರೂಷಕರು ರೋಗಿಗಳ ಭಾವನೆ ಅರ್ಥ ಮಾಡಿಕೊಂಡು ಸೂಕ್ತ ಚಿಕಿತ್ಸೆಗೆ ಮುಂದಾಗಬೇಕು. ಸಮಾಜದಲ್ಲಿ ಮಾನವೀಯತೆ ಮೆರೆಯುವ ಈ ಕೆಲಸವನ್ನು ಅಪೇಕ್ಷಿಸುವ ವಿದ್ಯಾರ್ಥಿಗಳು ಇದನ್ನು ಅರಿತು ಅದರ ಪಾವಿತ್ರ್ಯತೆಯ ಘನತೆ ಕಾಪಾಡಬೇಕು ಎಂದು ಅವರು ಆಶಿಸಿದರು.
ಕಾರ್ಯಕ್ರಮದಲ್ಲಿ ಬೇಸಿಕ್ ಬಿಎಸ್ಸಿ ನರ್ಸಿಂಗ್ ಪದವಿಯ 17ನೇ ತಂಡದ ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.
ಜೆಎಸ್ಎಸ್ ವೈದ್ಯಕೀಯ ಶಿಕ್ಷಣ ವಿಭಾಗದ ನಿರ್ದೇಶಕ ಆರ್.ಮಹೇಶ್ ಅಧ್ಯಕ್ಷತೆ ವಹಿಸಿದ್ದರು.
ಸಂತ ಜಾನರ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ.ಸಿ. ಸಲ್ಸಿ ಮೇರಿ, ಜೆಎಸ್ಎಸ್ ಅಸ್ಪತ್ರೆಯ ಶುಶ್ರೂಷಕ ಅಧೀಕ್ಷಕಿ ಗಾಯತ್ರಮ್ಮ ಮುಖ್ಯ ಅತಿಥಿಗಳಾಗಿದ್ದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ.ಶೀಲಾ ವಿಲಿಯಮ್ಸ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

