ಮೈಸೂರು

ಮಾಲಿಕುಲರ್ ಸ್ಪೆಕ್ಟ್ರೋಸ್ಕೋಪಿ ಕುರಿತ ಎರಡು ದಿನಗಳ ವಿಚಾರ ಸಂಕಿರಣ

Published On :

ನಂಜನಗೂಡು: ಪಟ್ಟಣದ ಜೆಎಸ್‌ಎಸ್ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ವತಿಯಿಂದ ಯುಜಿಸಿ ಪ್ರಾಯೋಜಕತ್ವದಲ್ಲಿ ಮಾಲಿಕುಲರ್ ಸ್ಪೆಕ್ಟ್ರೋಸ್ಕೋಪಿ ಕುರಿತ ಎರಡು ದಿನಗಳ ವಿಚಾರ ಸಂಕಿರಣ ನಡೆಯಿತು.
ಮೈಸೂರಿನ ಮಾನಸಗಂಗೋತ್ರಿಯ ರಾಸಾಯನಶಾಸ್ತ್ರ ವಿಭಾಗದ ಅಧ್ಯಕ್ಷ ಡಾ.ವೈ.ಎಸ್. ಯತಿರಾಜನ್ ಎಕ್ಸರೇ ಕ್ರಿಸ್ಟಲೋಗ್ರಫಿ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು. ನಂತರ ನಡೆದ ಎರಡು ತಾಂತ್ರಿಕ ಗೋಷ್ಠಿಗಳಲ್ಲಿ ಧಾರವಾಡದ ಕರ್ನಾಟಕ ವಿವಿ ರಾಸಾಯನಶಾಸ್ತ್ರ ಪ್ರಾಧ್ಯಾಪಕ ಡಾ.ಎಂ.ವಿ. ಕುಲಕರ್ಣಿ, ಮಹಾರಾಷ್ಟ್ರದ ಶಿವಾಜಿ ವಿವಿ ಸಾವಯವ ರಾಸಾಯನಶಾಸ್ತ್ರ ಪ್ರಾಧ್ಯಾಪಕ ಡಾ.ಜಿ.ಎಸ್. ರಾಶಿನ್ ಉಪನ್ಯಾಸ ನೀಡಿದರು.
ಸಮಾರೋಪ ಸಮಾರಂಭದಲ್ಲಿ ಮಂಡ್ಯ ಪಿಇಎಸ್ ಕಾಲೇಜಿನ ರಾಸಾಯನಶಾಸ್ತ್ರ ಪ್ರಾಧ್ಯಾಪಕ ಹಾಗೂ ಮೈಸೂರು ವಿವಿ ಕಾಸಗಿ ಕಾಲೇಜುಗಳ ವಿಭಾಗದ ಅಧ್ಯಾಪಕ ಸಂಘದ ಅಧ್ಯಕ್ಷ ಡಾ.ಸಿ.ಆರ್. ರಾಜು, ಜೆಎಸ್‌ಎಸ್ ಮುಕ್ತ ಶಾಲೆಯ ನಿರ್ದೇಶಕ ಡಾ.ಕೆ.ಎಂ. ವೀರಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪ್ರಾಂಶುಪಾಲ ಪ್ರೊ. ಕೆ.ರಾಮಮೂರ್ತಿರಾವ್ ಅಧ್ಯಕ್ಷತೆ ವಹಿಸಿದ್ದರು. ರಾಯಚೂರಿನ ಮುನಾಫ್, ಕೋಲಾರದ ಡಾ. ಸದಾಶಿವಮೂರ್ತಿ ಮತ್ತು ರಾಮನಗರದ ಮಲ್ಲಪ್ಪ ಮಾತನಾಡಿದರು.
ಪೂಜಾ ಮತ್ತು ಜ್ಯೋತಿ ಪ್ರಾರ್ಥಿಸಿದರು. ಎಸ್. ಲಕ್ಷ್ಮೀ ಸ್ವಾಗತಿಸಿದರು. ವಿಚಾರ ಸಂಕಿರಣದ ಸಂಯೋಜನಾಧಿಕಾರಿ ಡಾ.ಎಂ.ಕೆ. ಮಂಜುಳ ಎರಡು ದಿನಗಳ ವಿಚಾರ ಸಂಕಿರಣದ ವರದಿ ಮಂಡಿಸಿ, ವಂದಿಸಿದರು. ಹಾಜಿರಾ ಬಾನು ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.