ನಗರದಲ್ಲಿ ನಾನಾ ಸಂಘಟನೆಗಳಿಂದ ಪ್ರತಿಭಟನೆ
ಕ.ಪ್ರ.ವಾರ್ತೆ ಮೈಸೂರು ಮಾ. 13
ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಒಂದು ಹಾಗೂ ಜಿಲ್ಲಾಧಿಕಾರಿ ಕಚೇರಿ ಬಳಿ ಎರಡು ಸೇರಿದಂತೆ ಒಟ್ಟು ಮೂರು ಪ್ರತಿಭಟನೆಗಳು ಗುರುವಾರ ನಡೆದವು. ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಮೈಸೂರು ಕನ್ನಡ ವೇದಿಕೆ, ದಲಿತ ಸಂಘರ್ಷ ಸಮಿತಿ ಹಾಗೂ ಭಾರತೀಯ ಮಜ್ದೂರ್ ಸಂಘದವರು ಪ್ರತ್ಯೇಕವಾಗಿ ಪ್ರತಿಭಟಿಸಿದರು.
ಮೆಟ್ಟಿಲಿಗೆ ಮೇಲ್ಛಾವಣಿ ಬೇಡ: ಚಾಮುಂಡಿಬೆಟ್ಟದ ಮೆಟ್ಟಿಲುಗಳಿಗೆ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ವಿರೋಧಿಸಿ ಮೈಸೂರು ಕನ್ನಡ ವೇದಿಕೆಯವರು ಚಾಮುಂಡಿಬೆಟ್ಟದ ಪಾದದ ಬಳಿ ಪ್ರತಿಭಟಿಸಿದರು.
ಮೇಲ್ಛಾವಣಿಯಿಂದ ಬೆಟ್ಟದ ನೈಜ ಸೌಂದರ್ಯ ಹಾಳಾಗುತ್ತದೆ. ಇದನ್ನು ನಿರ್ಮಿಸುವ ಬದಲು ಬೆಟ್ಟದಲ್ಲಿ ಗಿಡ ಮರಗಳನ್ನು ಬೆಳೆಸಿ, ಉತ್ತಮ ವಾತಾವರಣ ಕಲ್ಪಿಸಬೇಕು. ಚಾಮುಂಡಿಬೆಟ್ಟದಲ್ಲಿ ಮೂಲಭೂತ ಸೌಲಭ್ಯ ಒದಗಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದರು.
ವೇದಿಕೆಯ ಅಧ್ಯಕ್ಷ ಎಸ್. ಬಾಲಕೃಷ್ಣ, ಮುಖಂಡ ನಾಲಾಬೀದಿ ರವಿ, ಸುರೇಶಬಾಬು, ಅರವಿಂದ್, ಗೋಪಿ, ಪ್ರಕಾಶ್, ಬಾಬು, ಭಾನು ಮೋಹನ್, ಚಂದ್ರು, ಅಜಯ್ಕುಮಾರ್ ಜೈನ್, ಸುನಿಲ್ಕುಮಾರ್, ವೆಂಕಟೇಶ್ ಮೊದಲಾದವರು ಇದ್ದರು.
ಡಿಸಿ ಕಚೇರಿ ಎದುರು ದಸಂಸ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ದಲಿತರ ಭೂಮಿ ರಕ್ಷಣೆಗಾಗಿ ಹೋರಾಟ ನಡೆಸುತ್ತಿದ್ದ ದಸಂಸ ಮುಖಂಡರ ಮೇಲೆ ಸುಳ್ಳು ಮೊಕದ್ದಮೆ ದಾಖಿಲಿಸಿ ಜೈಲಿಗೆ ಹೋಗುವಂತೆ ಮಾಡಿರುವ ಜಿಲ್ಲಾಧಿಕಾರಿ ವಿಶಾಲ್ ಹಾಗೂ ಉಪ ವಿಭಾಗಾಧಿಕಾರಿ ಶಾಂತಲಾ ಅವರನ್ನು ವಜಾಗೊಳಿಸಲು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು. ರಾಜ್ಯಾದ್ಯಂತ ದಸಂಸ ಕಾರ್ಯಕರ್ತರನ್ನು ರೌಡಿ ಪಟ್ಟಿಗೆ ಸೇರಿಸುತ್ತಿರುವುದನ್ನು ಕೈಬಿಡಬೇಕು ಎಂದು ಅವರು ಒತ್ತಾಯಿಸಿದರು. ದಸಂಸ ಜಿಲ್ಲಾ ಸಂಚಾಲಕ ಬೆಟ್ಟಯ್ಯ ಕೋಟೆ, ಜಿಲ್ಲಾ ಸಂಘಟನಾ ಸಂಚಾಲಕ ಆಲಗೂಡು ಶಿವಕುಮಾರ್, ರತ್ನಪುರಿ ಪುಟ್ಟಸ್ವಾಮಿ, ಶಂಭುಲಿಂಗಸ್ವಾಮಿ, ಚೋರನಹಳ್ಳಿ ಶಿವಣ್ಣ, ಮುಖಂಡ ಬಿ.ಡಿ. ಶಿವಬುದ್ಧಿ, ಜೆ. ಭೀಮರಾಜ್, ಕುಕ್ಕೂರು ರಾಜು, ಯಡತೊರೆ ಮಹದೇವಯ್ಯ, ಎಸ್. ರಾಜಣ್ಣ, ಮಹೇಶ್, ನಾಗರಾಜು, ಅಪ್ಸರ್, ಗುರುಲಿಂಗು, ಶ್ರೀನಿವಾಸ್, ಸಿದ್ದಪ್ಪ, ಪುರುಷೋತ್ತಮ್ ಇದ್ದರು.
ಬೆಲೆ ಏರಿಕೆ ವಿರುದ್ಧ ಮಜ್ದೂರ್ ಸಂಘ: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಮಜ್ದೂರ್ ಸಂಘದವರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದರು. ರುಪಾಯಿ ಬೆಲೆಯ ಅಪಮೌಲ್ಯ ತಡೆಯಬೇಕು. ವ್ಯಾಪಾರ ವಿನಿಮಯ ಕೊರತೆಯಲ್ಲಿ ಏರಿಕೆ ಆಗಬೇಕು. ಗರಿಷ್ಟ ಮಟ್ಟಕೇರುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು. ಕೃಷಿ ಮತ್ತು ಉತ್ಪಾದನಾ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿಸಿ, ನಿರುದ್ಯೋಗ ನಿವಾರಣೆಗೆ ಆದ್ಯತೆ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಸೂಕ್ಷ್ಮ ಉದ್ಯಮಗಳಾದ ಕೃಷಿ, ಟೆಲಿಕಾಂ, ಆರ್ಥಿಕ ಮತ್ತು ಚಿಲ್ಲರೆ ವ್ಯಾಪಾರ ಕ್ಷೇತ್ರಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದರು. ಸಂಘದ ಜಿಲ್ಲಾಧ್ಯಕ್ಷ ಎಚ್.ಎಸ್. ಸದಾಶಿವ, ಜಿಲ್ಲಾ ಕಾರ್ಯದರ್ಶಿ ಎಚ್.ಕೆ. ಗುರುರಾಜ್ ನೇತೃತ್ವ ವವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

