19 ರಂದು ಮಳವಳ್ಳಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ
ಮಳವಳ್ಳಿ: ಪುರಸಭಾ ಚುನಾವಣೆ ನಡೆದು ವರ್ಷದ ನಂತರ ಅಧಿಕಾರ ಹಿಡಿಯುವ ಭಾಗ್ಯ ಈಗ ಒದಗಿ ಬಂದಿದೆ. ಒಂದೆಡೆ ಲೋಕಸಭೆ ಚುನಾವಣೆ ಆರಂಭವಾಗಿರುವ ಬೆನ್ನಲ್ಲೇ ಮಳವಳ್ಳಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದ್ದು ಮಾ.19 ರಂದು ಚುನಾವಣಾ ದಿನಾಂಕ ನಿಗಧಿಯಾಗಿರುವ ಹಿನ್ನೆಲೆಯಲ್ಲಿ ಪುರಸಭೆಯಲ್ಲಿ ರಾಜಕೀಯ ಚಟುವಟಿಕೆ ಚುರುಕಾಗಿದೆ.
ಪುರಸಭೆ ಅಧಿಕಾರ ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್ ಹಾಗೂ ಜೆಡಿಎಸ್ ಶತಪ್ರಯತ್ನ ನಡೆಸುತ್ತಿದ್ದು, ಒಟ್ಟು 23 ಸ್ಥಾನಗಳ ಪೈಕಿ 11 ಕ್ಷೇತ್ರಗಳಲ್ಲಿ ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಜೆಡಿಎಸ್ ಅಧಿಕಾರ ಗದ್ದುಗೆಯ ಮೇಲೆ ಕಣ್ಣಿಟ್ಟಿದ್ದು ಇದಕ್ಕಾಗಿ ಇತರ ಪಕ್ಷಗಳ ಸದಸ್ಯರನ್ನು ಓಲೈಸಲು ಮುಂದಾಗಿದೆ.
ಕಳೆದ ಅವಧಿಯಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೂ 4 ಸ್ಥಾನಗಳಲ್ಲಿ ಗೆದ್ದಿರುವ ಪಕ್ಷೇತರರು ಈಗಾಗಲೆ ಕಾಂಗ್ರೆಸ್ ಬೆಂಬಲಿಸುವು ನಿರ್ಧಾರ ಪ್ರಕಟಿಸಿರುವುದರಿಂದ ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ಸಮಬಲದ ಪೈಪೋಟಿ ಏರ್ಪಟ್ಟಿದೆ.
ಈ ನಡುವೆ ಒಂದು ಸ್ಥಾನ ಗೆದ್ದಿರುವು ಬಿಜೆಪಿ ಅಭ್ಯರ್ಥಿ ಯಾವ ಪಕ್ಷ ಬೆಂಬಲಿಸುತ್ತಾರೆ ಎಂಬುದರ ಮೇಲೆ ಅಧಿಕಾರದ ಚುಕ್ಕಾಣಿ ಯಾವ ಪಕ್ಷದ ಪಾಲಾಗುತ್ತದೆ ಎಂಬುದು ತಿಳಿಯಲಿದೆ.
ಅಧ್ಯಕ್ಷ ಸ್ಥಾನ ಪಜಾ ಮಹಿಳೆಗೆ ಮೀಸಲಾಗಿದ್ದು, ಕಾಂಗ್ರೆಸ್ನಲ್ಲಿ ಎಸ್ಸಿ ವರ್ಗದ ಮಹಿಳಾ ಸದಸ್ಯರು ಇಲ್ಲದ ಕಾರಣ ಪಕ್ಷೇತರ ಸದಸ್ಯೆ ಸರೋಜಮ್ಮ ಮುತ್ತುರಾಜ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅಧ್ಯಕ್ಷೆ ಸ್ಥಾನದ ಅಭ್ಯರ್ಥಿ ಮಾಡುವ ಯತ್ನ ನಡೆದಿದೆ. ಜೆಡಿಎಸ್ನಿಂದ ಸಾವಿತ್ರಕುಮಾರ್ ಕಣಕ್ಕಿಳಿಯಲಿದ್ದಾರೆ.
ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ(ಎ) ಮಹಿಳೆಗೆ ಮೀಸಲಾಗಿದ್ದು, ಜೆಡಿಎಸ್ನಿಂದ ಮಣಿ ಅಥವಾ ನಂದಿನಿ ಅಭ್ಯರ್ಥಿಯಾಗಲಿದ್ದಾರೆ. ಕಾಂಗ್ರೆಸ್ನಿಂದ ಯಾರನ್ನು ಕಣಕ್ಕಿಳಿಸುತ್ತಾರೆ ಎಂಬುದು ನಿಗೂಢವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

