ಕೆ. ಆರ್.ಮಲ್ಲಿಕಾರ್ಜುನಯ್ಯ ಮನವೊಲಿಕೆಗೆ ಎಆರ್ಕೆ ಯತ್ನ
ಮೈಸೂರು: ಅಸಮಾಧಾನಕ್ಕೆ ಒಳಗಾಗಿರುವ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ ಅವರನ್ನು ಮಾಜಿ ಶಾಸಕ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಆರ್. ಕೃಷ್ಣಮೂರ್ತಿ ಅವರು ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಿದರು.
ಜೆ.ಪಿ. ನಗರದ ಅವರ ನಿವಾಸಕ್ಕೆ ತೆರಳಿದ ಎ.ಆರ್. ಕೃಷ್ಣಮೂರ್ತಿ ಅವರು, ಯಾವುದೆ ಕಾರಣಕ್ಕೂ ಪಕ್ಷದಿಂದ ದೂರವಾಗದಂತೆ ಮನವಿ ಮಾಡಿದರು. ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆಯಲ್ಲಿ ತೊಡಗಬೇಕು. ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ತೊರೆಯದಂತೆ ಮನವಿ ಮಾಡಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ, ಎರಡು ದಿನಗಳ ಬಳಿಕ ನನ್ನ ನಿಲುವು ಪ್ರಕಟಿಸುತ್ತೇನೆ. ಅಲ್ಲಿಯವರೆಗೆ ಅವಕಾಶ ನೀಡಿ ಎಂದಷ್ಟೆ ಹೇಳಿರುವುದಾಗಿ ಕನ್ನಡಪ್ರಭಕ್ಕೆ ತಿಳಿಸಿದರು.
ಅಲ್ಲದೆ ಇತರೆ ಕೆಲವು ಪಕ್ಷಗಳು ತಮ್ಮನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂಬ ಮಾತನ್ನು ಕೇಳಿದ್ದೇನೆ. ಆದರೆ ಯಾರೂ ಖುದ್ದು ಸಂಪರ್ಕಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರೊ.ಕೆ.ಆರ್. ಮಲ್ಲಿಕಾರ್ಜುನಪ್ಪ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು, ಮೈಸೂರಿನಿಂದ ಟಿಕೆಟ್ ನೀಡಲು ಜೆಡಿಎಸ್ ಪ್ರಯತ್ನಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

