ಸುದ್ದಿ ಸಂಕ್ಷೇಪ
ಅಧಿಕಾರಿ ಹುದ್ದೆಗೆ ನೇರ ನೇಮಕ
ಚಾಮರಾಜನಗರ: ಮೈಸೂರಿನ ಚೋಳಮಂಡಲ ಎಂಎಸ್ ಜನರಲ್ ವಿಮಾ ಕಂಪನಿಯು ಸೇಲ್ಸ್ ಆಫೀಸರ್ಸ್, ಎಕ್ಸಿಕ್ಯುಟಿವ್ ಡೈರೆಕ್ಟರ್ ಮಾರ್ಕೆಂಟಿಂಗ್ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ಮಾ. 19 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿಲ್ಲಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಸಲಿದೆ.
ಪಿಯುಸಿ ಅಥವಾ ಪದವಿ ವಿದ್ಯಾರ್ಹತೆ ಹೊಂದಿದ್ದು 18 ರಿಂದ 30ರ ವಯೋವುತಿಯೊಳಗಿರುವ ಪುರುಷ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಆಸಕ್ತರು ಸ್ವ ವಿವರಗಳೊಂದಿಗೆ ಹಾಜರಾಗಬಹುದು. ಹೆಚ್ದಿನ ಮಾಹಿತಿಗೆ ದೂರವಾಣಿ ಸಂಖ್ಯೆ 08226-222009 ಸಂಪರ್ಕಿಸುವಂತೆ ತಿಳಿಸಿದೆ.
ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ
ಚಾಮರಾಜನಗರ: ರಾಜ್ಯ ರಿಸರ್ವ್ ಪೊಲೀಸ್ ಕಾನ್ಸ್ಸ್ಟೇಬಲ್ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ
ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 936 ಪುರುಷ ಹಾಗೂ 99 ಮಹಿಳಾ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅಭ್ಯರ್ಥಿಗಳು ಎಸ್ಎಸ್ಎಲ್ಸಿ. ತೇರ್ಗಡೆಯಾಗಿದ್ದು 18 ರಿಂದ 25ರ ವಯೋವುತಿಯೊಳಗಿರಬೇಕು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗದ ಅಭ್ಯರ್ಥಿಗಳಾಗಿದ್ದಲ್ಲಿ ಗರಿಷ್ಟ ವಯೋವುತಿ 27 ವರ್ಷ. ಅರ್ಜಿ ಸಲ್ಲಿಕೆಗೆ ಮಾ. 30 ಕಡೆಯ ದಿನ. ವಿವರಗಳಿಗೆ ವೈಬ್ಸೈಟ್ ಢಿಢಿಢಿ.್ಞಡಢ.್ಜ್ಟಢ.್ಝಟಿ ನೋಡಬಹುದು. ನೇಮಕಾತಿಗೆ ನಡೆಸಲಾಗುವ ಲಿಖಿತ ಪರೀಕ್ಷೆಗೆ ನಗರದ ಜಿಲ್ಲಾಡಳಿತ ಭವನದಲ್ಲಿರುವ ಉದ್ಯೋಗ ವಿನಿಮಯ ಕಚೇರಿಯ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರವು ಉಚಿತವಾಗಿ ತರಬೇತಿ ನೀಡಲಿದೆ. ಆಸಕ್ತರು ಮಾನವ ಸಂಪನ್ಮೂಲ ಕೇಂದ್ರದಲ್ಲಿ ಹೆಸರು ನೊಂದಾಯಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ನಾಳೆ ವಿದ್ಯುತ್ ಪೂರೈಕೆ ವ್ಯತ್ಯಯ
ಚಾಮರಾಜನಗರ: ತಾಲೂಕಿನ ಹೊನ್ನಹಳ್ಳಿ ಹಾಗೂ ಅಟ್ಟುಗೂಳಿಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮಾ. 19 ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕೊತ್ತಲವಾಡಿ, ಅರಕಲವಾಡಿ, ಯರಗನಹಳ್ಳಿ, ಸುವರ್ಣ ನಗರ, ಫ್ಯಾಕ್ಟರಿ, ಬಿಸಲವಾಡಿ, ಪುಣಜನೂರು, ಡೊಳ್ಳಿಪುರ, ಅಮಚವಾಡಿ, ಅಟ್ಟುಗೂಳಿಪುರ, ಕೋಳಿಪಾಳ್ಯ, ಹೊಂಗಲವಾಡಿ, ಸಿದ್ದಯ್ಯನಪುರ ಫೀಡರ್ಗಳ ವ್ಯಾಪ್ತಿಗೆ ಬರುವ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಸೆಸ್ಕ್ ಕಾರ್ಯ ನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

