ಮೈಸೂರು

ಹಾಸ್ಟೆಲ್‌ಗೆ ಪ್ರವೇಶಿಸಿದ ದುಷ್ಕರ್ಮಿ: ಪ್ರತಿಭಟನೆ

Published On :

ಮೈಸೂರು: ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಹಾಸ್ಟೆಲ್‌ಗೆ ದುಷ್ಕರ್ಮಿಯೊಬ್ಬ ಪ್ರವೇಶಿಸಿರುವುದನ್ನು ಹಾಗೂ ಈ ವಿಚಾರವನ್ನು ವಾರ್ಡನ್‌ಗೆ ತಿಳಿಸಿದರೂ, ಸ್ಥಳಕ್ಕೆ ಆಗಮಿಸದಿರುವುದನ್ನು ಖಂಡಿಸಿ ವಿದ್ಯಾರ್ಥಿನಿಯರು ಮಂಗಳವಾರ ಪ್ರತಿಭಟಿಸಿದರು.
ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಮತ್ತು ಹಾಸ್ಟೆಲ್ ಎದುರೆದು ಇದೆ. ಮಧ್ಯರಾತ್ರಿ 1.40ಕ್ಕೆ ದುಷ್ಕರ್ಮಿಯೊಬ್ಬ ಹಾಸ್ಟೆಲ್‌ಗೆ ನುಗ್ಗಿ 5-6 ಕೊಠಡಿಗಳಿಗೆ ಹೊರಗಿನಿಂದ ಚಿಲಕ ಹಾಕಿದ್ದಾನೆ. ಅಲ್ಲದೆ, ನಿಂದಿಸಿದ್ದಾನೆ.
ಈ ವಿಚಾರವನ್ನು ವಿದ್ಯಾರ್ಥಿನಿಯರು ಹಾಸ್ಟೆಲ್ ವಾರ್ಡನ್ ನಾಗರತ್ನ ಅವರಿಗೆ ತಿಳಿಸಿದ್ದಾರೆ. ಆದರೆ, ನಾಗರತ್ನ ಅವರು ಸ್ಥಳಕ್ಕೂ ಆಗಮಿಸಿದೇ ನಿರ್ಲಕ್ಷ್ಯ ತೋರಿದ್ದಾರೆ. ಹಾಸ್ಟೆಲ್‌ನಲ್ಲಿ ಮೂಲಭೂತ ಸೌಲಭ್ಯಗಳಿಲ್ಲ ಎಂದು ಆರೋಪಿಸಿ ನೂರಾರು ವಿದ್ಯಾರ್ಥಿನಿಯರು ರಸ್ತೆತಡೆ ನಡೆಸಿ ಪ್ರತಿಭಟಿಸಿದರು.
ಸ್ಥಳಕ್ಕೆ ಆಗಮಿಸಿದ ಶಾಸಕ ವಾಸು, ಕಾಲೇಜು ಪ್ರಾಂಶುಪಾಲ ಸಶೀಲಮ್ಮ ಅವರು ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ ಬಳಿಕ ವಿದ್ಯಾರ್ಥಿನಿಯರು ಪ್ರತಿಭಟನೆ ಹಿಂಪಡೆದರು.
ದುಷ್ಕರ್ಮಿ ಹಾಸ್ಟೆಲ್‌ಗೆ ಪ್ರವೇಶಿಸಿರುವುದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ದೇವರಾಜ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ದುಷ್ಕರ್ಮಿ ಬಂಧನಕ್ಕೆ ಒತ್ತಾಯ: ಮಹಾರಾಣಿ ವಿಜ್ಞಾನ ಕಾಲೇಜು ಹಾಸ್ಟೆಲ್ ಒಳಗೆ ತಡರಾತ್ರಿ ಅತಿಕ್ರಮವಾಗಿ ಪ್ರವೇಶಿಸಿದ ದುಷ್ಕರ್ಮಿ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ಬೆದರಿಕೆ ಒಡ್ಡಿರುವುದು ಆತಂಕಕಾರಿ ಬೆಳವಣಿಗೆ. ಆ ವ್ಯಕ್ತಿಯ ಚಿತ್ರ ಈಗಾಗಲೇ ಹಾಸ್ಟೆಲ್ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಈ ಕೂಡಲೇ ದುಷ್ಕರ್ಮಿಯನ್ನು ಬಂಧಿಸಿ, ವಿದ್ಯಾರ್ಥಿನಿಯರಿಗೆ ಸೂಕ್ತ ಭದ್ರತೆ ನೀಡಬೇಕು ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ಜಿಲ್ಲಾ ಕಾರ್ಯದರ್ಶಿ ಪಿ.ಎಸ್. ಸಂಧ್ಯಾ, ಜಿಲ್ಲಾ ಉಪಾಧ್ಯಕ್ಷ ಸೀಮಾ ಜಿ. ಸ್ವಾಮಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.