ಅಕ್ರಮ ಮರಳು ಸಾಗಣೆ ಲಾರಿಗಳ ಮೇಲೆ ದಾಳಿ
ಟಿ. ನರಸೀಪುರ: ತಾಲೂಕಿನ ವಿವಿಧೆಡೆ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ 22 ಲಾರಿಗಳನ್ನು ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ವಶಪಡಿಸಿದ್ದಾರೆ.
ಕಾವೇರಿ ಮತ್ತು ಕಪಿಲಾ ನದಿಗಳ ಪಾತ್ರದಿಂದ ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿರುವ ಮಾಹಿತಿಯನ್ನಾಧರಿಸಿ ತಲಕಾಡು ಪೊಲೀಸ್ ಸಬ್ಇನ್ಸ್ಪೆಕ್ಟರ್ ಎಸ್. ಆನಂದ್ ನೇತೃತ್ವದಲ್ಲಿ ಆರಂಭವಾದ ಕಾರ್ಯಾಚರಣೆ ಚಂದಹಳ್ಳಿ ಚಾನಲ್ ಬಳಿ ಬೆಂಗಳೂರಿಗೆ ತೆರಳುತ್ತಿದ್ದ 5 ಲಾರಿ, ಒವರ್ ಲೋಡ್ ಮಾಡಿದ್ದ 6 ಲಾರಿ, ಪರ್ಮೀಟ್ ಇಲ್ಲದೆ ಇದ್ದ 6 ಲಾರಿ ಹಾಗೂ ಹೆಮ್ಮಿಗೆ ಬಳಿ 4 ಲಾರಿಗಳನ್ನು ವಶಪಡಿಸಿಕೊಂಡರು.
ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ಮಹೇಶ್ಕುಮಾರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎಎಸ್ಐ ಸಿ.ಬಿ. ರಾಜಣ್ಣ, ಪೇದೆಗಳಾದ ಮಂಚಗಯ್ಯ, ಸಿದ್ದರಾಜು, ಕೃಷ್ಣಯ್ಯ, ಕುಮಾರ, ರೈಟರ್ ಸಿದ್ದರಾಜು ಇದ್ದರು.
ನರಸೀಪುರದಲ್ಲಿ 6 ಲಾರಿ: ನರಸೀಪುರ ಪೊಲೀಸ್ ಸಬ್ಇನ್ಸ್ಪೆಕ್ಟರ್ ಶಶಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ 6 ಮರಳು ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ತಾಲೂಕಿನ ಚೌಹಳ್ಳಿ ಗೇಟ್ನಲ್ಲಿ 4 ಹಾಗೂ ನೀಲಸೋಗೆ ಬಳಿ 2 ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

