ಮೈಸೂರು

ವಿದೇಶಿಗರ ದಾಳಿ ತಡೆಗಟ್ಟಲು ಕೈ ವಿಫಲ

Published On :

ಟಿ. ನರಸೀಪುರ: ಚೀನಾದ ಅತಿಕ್ರಮಣಕ್ಕೆ ಕಡಿವಾಣ ಹಾಕದೆ, ಪಾಕಿಸ್ತಾನದ ಗುಂಡೇಟಿಗೆ ಪ್ರತ್ಯುತ್ತರ ನೀಡದೆ, ಬಾಂಗ್ಲಾ ದೇಶದ ಒಳನುಸುಳುವಿಕೆ ತಡೆಗಟ್ಟದ ಕಾಂಗ್ರೆಸ್ ದೇಶ ರಕ್ಷಣೆ ಮಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎ.ಆರ್. ಕೃಷ್ಣಮೂರ್ತಿ ಹೇಳಿದರು.
ಪಟ್ಟಣದ ಗೋಪಾಲಪುರದಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಹತ್ತು ವರ್ಷಗಳ ಆಡಳಿತದಿಂದ ದೇಶದ ಭದ್ರತೆ ಸಡಿಲಗೊಂಡಿದೆ. ಪ್ರಧಾನಿ ಮನಮೋಹನ್‌ಸಿಂಗ್ ಅವರು ನೆರೆಯ ಸಣ್ಣ ರಾಷ್ಟ್ರ ಪಾಕಿಸ್ತಾನದ ಪ್ರಧಾನಿ ಅವಹೇಳನಕಾರಿಯಾಗಿ ಟೀಕಿಸಿದರೂ ಮಾತನಾಡಲಾರದಷ್ಟು ದುರ್ಬಲರಾಗಿದ್ದಾರೆ ಎಂದರು.
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ದೇಶವನ್ನು ರಕ್ಷಣೆ ಮಾಡಿ, ಆಡಳಿತ ವ್ಯವಸ್ಥೆಯ ಮೇಲೆ ಹಿಡಿತ ಸಾಧಿಸುವರೆಂಬ ನಂಬಿಕೆ ದೇಶದ ಸಮಸ್ತ ಜನರಲ್ಲಿ ಇದೆ. ಹೀಗಾಗಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಸಮೀಕ್ಷೆಗಳ ಮೂಲಕ ಒಲವು ವ್ಯಕ್ತವಾಗುತ್ತಿದೆ. ತಾವು ಕೂಡ ಕಳೆದ ಲೋಕಸಭಾ ಚುನಾವಣೆ ಸೇರಿದಂತೆ ವಿಧಾನಸಭೆಯ ಸಾಲು ಸಾಲು ಚುನಾವಣೆಗಳಲ್ಲಿ ಸೋಲನ್ನು ಅನುಭವಿಸಿದ್ದೇವೆ. ಶಾಸಕನಾಗಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷನಾಗಿ ಜನಪರ ಕಾರ್ಯಗಳನ್ನು ಕೈಗೊಂಡಿದ್ದೇನೆ. ಈ ಚುನಾವಣೆಯಲ್ಲಾದರೂ ಜನರು ತಮ್ಮನ್ನು ಲೋಕಸಭೆಗೆ ಆಯ್ಕೆ ಮಾಡಿ, ಅಭಿವೃದ್ಧಿಗೆ ದುಡಿಯಲು ಅವಕಾಶ ನೀಡುವಂತೆ ಅವರು ಮನವಿ ಮಾಡಿದರು.  
ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್, ಪಪಂ ಅಧ್ಯಕ್ಷೆ ರತ್ನಮ್ಮ ಲಿಂಗಣ್ಣ, ಜಿಪಂ ಮಾಜಿ ಅಧ್ಯಕ್ಷ ಕಾ.ಪು. ಸಿದ್ದವೀರಪ್ಪ, ಮಾಜಿ ಉಪಾಧ್ಯಕ್ಷ ಡಾ.ಶಿವರಾಮ, ಹಿರಿಯ ಮುಖಂಡ ಕರೋಹಟ್ಟಿ ಮಹದೇವಯ್ಯ, ಬಿಜೆಪಿ ಕ್ಷೇತ್ರಾಧ್ಯಕ್ಷ ಕೆ.ಎಸ್. ಬಸವರಾಜು, ಜಿಲ್ಲಾ ಉಪಾಧ್ಯಕ್ಷ ತೋಟದಪ್ಪ ಬಸವರಾಜು, ಆರ್. ಅರ್ಜುನ್, ಟೌನ್ ಅಧ್ಯಕ್ಷ ಎಸ್. ದಿಲೀಪ್, ಸ್ಲಂ ಮೋರ್ಚಾ ಅಧ್ಯಕ್ಷ ಮಣಿಕಂಠ, ಸಿಂಡಿಕೇಟ್ ಸದಸ್ಯ ದಾಸಯ್ಯ, ಮಹಿಳಾ ಮೋರ್ಚಾ ಅಧ್ಯಕ್ಷೆ ಮೀನಾ, ಮಂಗಳ, ಮುಖಂಡರಾದ ಸುಜ್ಜಲೂರು ಮಹದೇವ, ಕೊಳತ್ತೂರು ಮಂಜುನಾಥ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.