ಮೈಸೂರು

ಸಮರ್ಪಕವಾಗಿ ಕೆಲಸ ಮಾಡದಿದ್ದಲ್ಲಿ ಶಿಸ್ತು ಕ್ರಮ

Published On :

ಮೈಸೂರು: ಅಧಿಕಾರಿಗಳು ಸಕಾಲದಲ್ಲಿ ತಮ್ಮ ಜವಾಬ್ದಾರಿ ಅರಿತು ತಮ್ಮ ಕೆಲಸ ನಿರ್ವಹಿಸದಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಪಂ ಸಿಇಒ ಪಿ.ಎ. ಗೋಪಾಲ್ ಎಚ್ಚರಿಕೆ ನೀಡಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಬುಧವಾರ ನಡೆದ ತಾಲೂಕು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬೇಸಿಗೆ ಬರುತ್ತಿರುವುದರಿಂದ ಪ್ರತಿಯೊಬ್ಬ ಅಧಿಕಾರಿಯು ಜಾಗೃತರಾಗಬೇಕೆಂದು ಹೇಳಿದರು. ತಾಲೂಕಿನ ಇಲಾಖೆಯ ಪ್ರಗತಿ ತಮಗೆ ತೃಪ್ತಿ ತಂದಿಲ್ಲ. ಚುನಾವಣೆ ಬಂದಿರುವುದರಿಂದ ಪ್ರತಿ ಹಳ್ಳಿಗೆ ಕುಡಿಯುವ ನೀರು, ಸ್ವಚ್ಛತೆಯ ಬಗ್ಗೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಕ್ರಮ ವಹಿಸಬೇಕು, ಪ್ರತಿ ಶಾಲೆಯ ಮಟ್ಟದಲ್ಲಿ ಮಕ್ಕಳ ಜೊತೆಗೂಡಿ ಗ್ರಾಮದಲ್ಲಿ ಜಾಥಾ ನಡೆಸಿ, ಜನರಲ್ಲಿ ಜಾಗೃತಿ ಮೂಡಿಸಬೇಕು. ನಾವು ಜನತೆಯ ಕೆಲಸ ಮಾಡುವುದಕ್ಕಾಗಿ ಬಂದಿದ್ದು, ಅದನ್ನು ಸಮರ್ಪಕವಾಗಿ ಮಾಡದಿದ್ದರೆ ನಾವು ಕರ್ತವ್ಯದಲ್ಲಿದ್ದು ವ್ಯರ್ಥವಾಗುತ್ತದೆ. ತಾಲೂಕು ಬಹಳ ಹಿಂದುಳಿದಿದೆ ಎಂದರೆ ಅದಕ್ಕೆ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ, ಯೋಜನೆಗಳನ್ನು ಸಕಾಲದಲ್ಲಿ ಅನುಷ್ಠಾನಗೊಳಿಸದೇ ಇದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ತಿಳಿಸಿದರು. ಸಭೆಯಲ್ಲಿ ಜಿಪಂ ಅಧಿಕಾರಿಗಳು, ತಾಪಂ ಇಒ ಲಿಂಗರಾಜು, ಜಿಪಂ ವ್ಯಾಪ್ತಿಯ ಅಧಿಕಾರಿಗಳು, ಗ್ರಾಪಂ ಪಿಡಿಒಗಳು, ಜಿಪಂ ತಾಂತ್ರಿಕ ಉಪವಿಭಾಗದ ಎಇಇ ಹಾಗು ಜೆಇಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.