ಪತ್ನಿ, ಮಗಳೊಂದಿಗೆ ನಾಮಪತ್ರ ಸಲ್ಲಿಕೆ
ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ಸಿಂಹ ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಬೆಳಗ್ಗೆ 11.30ಕ್ಕೆ ಕೋಟೆ ಆಂಜನೇಯ ಸ್ವಾಮಿ, ವಿಘ್ನೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ ಬಳಿಕ ದೇವಸ್ಥಾನ ಆವರಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.
ಈ ವೇಳೆ ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ, ವಿಧಾನ ಪರಿಷತ್ ಸದಸ್ಯ ಗೋ. ಮಧುಸೂದನ್, ಮಾಜಿ ಸದಸ್ಯ ತೋಂಟದಾರ್ಯ, ಪ್ರತಾಪ್ಸಿಂಹ ಅವರ ಪತ್ನಿ ಅರ್ಪಿತ ಮತ್ತು ಪುತ್ರಿ ವಿಪಂಚಿ ಇದ್ದರು.
ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ಸಿಂಹ, ಇಂದು ಮಧ್ಯಾಹ್ನ 12.30ಕ್ಕೆ ನಾಮಪತ್ರ ಸಲ್ಲಿಸಿದ್ದೇನೆ. ಇಂದಿನಿಂದ 25 ದಿನಗಳ ಕಾಲಾವಕಾಶ ಇದೆ. ಮೈಸೂರು- ಕೊಡಗು ಲೋಕಸಭಾ ವ್ಯಾಪ್ತಿಗೆ 8 ವಿಧಾನಸಭಾ ಕ್ಷೇತ್ರಗಳು ಬರುತ್ತದೆ. ಕ್ಷೇತ್ರಾದ್ಯಂತ ಪ್ರಚಾರ ಕೈಗೊಂಡು ಕಾರ್ಯಕರ್ತರನ್ನು ಪ್ರೋತ್ಸಾಹಿಸುತ್ತೇನೆ. ಮೋದಿ ಅವರ ಅಲೆ ಸುನಾಮಿಯಾಗಿ ಪರಿವರ್ತನೆ ಆಗುತ್ತಿದೆ. ಅನಿಶ್ಚಿತ ಮತದಾರರೂ ಸಹ ಮೋದಿಗೆ ಮತದಾನ ಮಾಡಲು ಮುಂದಾಗುತ್ತಿದ್ದಾರೆ ಎಂದರು.
ಈ ಬಾರಿಯ ಚುನಾವಣೆಯಲ್ಲಿ ನನಗೆ ಯಾರೂ ವೈರಿಗಳಿಲ್ಲ. ಇದು ಅಳಿವು ಉಳಿವಿನ ಚುನಾವಣೆ. ಆದ್ದರಿಂದ ಮೋದಿಯ ಬಗೆಗೆ ಮನದಟ್ಟು ಮಾಡಿಕೊಡುವ ಜವಾಬ್ದಾರಿ ನಮ್ಮ ಮೇಲಿರುತ್ತದೆ. ಹಿರಿಯರ ಆಶೀರ್ವಾದದ ಜೊತೆಗೆ ಯುವಕರು ಹೆಚ್ಚಾಗಿ ಬರುತ್ತಿದ್ದಾರೆ. ನಾನು ನಿರೀಕ್ಷಿಸಿರದಷ್ಟು ಬೆಂಬಲ ವ್ಯಕ್ತವಾಗಿದೆ ಎಂದರು. ವಿಧಾನ ಪರಿಷತ್ ಸದಸ್ಯ ಗೋ. ಮಧುಸೂದನ್, ಮಾಜಿ ಸದಸ್ಯ ತೋಂಟದಾರ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

