ಮೈಸೂರು

ಬಂಡಹಳ್ಳಿ ಶಾಲಾ ಪ್ರಕರಣ; ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ

Published On :

ಕೆ.ಆರ್. ನಗರ: ತಾಲೂಕಿನ ಬಂಡಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಪ್ರತಿಭಟನೆ ನೆಪದಲ್ಲಿ ಪಟ್ಟಣಕ್ಕೆ ಕರೆ ತಂದು ದುರುಪಯೋಗ ಪಡಿಸಿಕೊಂಡಿದ್ದು, ಈ ಸಂಬಂಧ ಶಾಲೆಯ ಶಿಕ್ಷಕರ ವಿರುದ್ಧ ಕ್ಷೇತ್ರ ಶಿಕ್ಷಾಣಾಧಿಕಾರಿಗಳು ಮತ್ತು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಶಿಸ್ತುಕ್ರಮ ಕೈಗೊಳ್ಳಬೇಕೆಂದು ಗ್ರಾಮದ ಮುಖಂಡ ರಾಜೇಗೌಡ ಮತ್ತು ರುದ್ರೇಗೌಡ ಒತ್ತಾಯಿಸಿದರು.
ಶಾಲೆಯ ಮುಖ್ಯಶಿಕ್ಷಕ ಸುರೇಶ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೊಕದ್ದಮೆ ದಾಖಲಾಗಿದ್ದು, ಇದಕ್ಕೆ ಎಪಿಎಂಸಿ ನಿರ್ದೇಶಕ ಬಂಡಹಳ್ಳಿ ಕುಚೇಲ ಕಾರಣ ಎಂದು ಪೂರ್ವಾಗ್ರಹಪೀಡಿತರಾಗಿರುವ ಕೆಲವು ರಾಜಕೀಯ ಮುಖಂಡರು ಹಾಗೂ ಮುಖ್ಯಶಿಕ್ಷಕ ಕುಚೇಲ ತೇಜೋವಧೆ ಮಾಡಲು ಮುಂದಾಗಿದ್ದಾರೆ ಎಂದವರು ಸುದ್ದಿಗೋಷ್ಠಿಯಲ್ಲಿ ದೂರಿದರು.
ಮುಖ್ಯ ಶಿಕ್ಷಕ ಸುರೇಶ್ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಿಸಿರುವವರು ಗ್ರಾಮದ ಮುಖಂಡ ಬಂಡಹಳ್ಳಿ ಕುಚೇಲ ಅವರ ಬಳಿ ಬಂದು ಶಿಕ್ಷಕನಿಂದ ತನಗೆ ಆಗುತ್ತಿರುವ ತೊಂದರೆ ಬಗ್ಗೆ ಹೇಳಿಕೊಂಡಿದ್ದಾರೆ. ಇದನ್ನು ಪ್ರಶ್ನಿಸಿ ಬುದ್ಧಿ ಹೇಳಿದ ಕುಚೇಲ ಅವರೊಂದಿಗೆ ಉಡಾಫೆಯಿಂದ ವರ್ತಿಸಿದ ಸುರೇಶ್, ಅವರ ವಿರುದದ್ಧೀ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಆರೋಪಿಸಿದರು. ಬಿ.ಟಿ. ರಾಜೇಗೌಡ, ರವಿ, ಗೋಪಾಲ್, ಕೃಷ್ಣೇಗೌಡ, ಚಂದ್ರೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.