'ಜಾತಿವಾದ ರಾಜಕಾರಣ ದೇಶದ ದುರಂತ'
ಹುಣಸೂರು: ದೇಶ ಆಳಲು ರಾಜಕೀಯ ಪಕ್ಷಗಳು ಹಾಗೂ ರಾಜಕಾರಣಿಗಳು ಜಾತಿವಾದ ಮುಂದಿಟ್ಟುಕೊಂಡು ಪೈಪೋಟಿ ನಡೆಸುತ್ತಿರುವುದು ದೇಶದ ದೊಡ್ಡ ದುರಂತ ಎಂದು ವಿಚಾರವಾದಿ ಡಾ.ಕೆ.ಎಸ್. ಭಗವಾನ್ ವಿಷಾದಿಸಿದರು.
ಪಟ್ಟಣದ ರೋಟರಿ ಭವನದಲ್ಲಿ ಸ್ಪಂದನ ಸಾಂಸ್ಕೃತಿಕ ಪರಿಷತ್, ರೋಟರಿ ಸಂಸ್ಥೆ ಹಾಗೂ ಮಕ್ಕಳ ಸಾಹಿತ್ಯ ವೇದಿಕೆ ಜಂಟಿಯಾಗಿ ಆಯೋಜಿಸಿದ್ದ ರಾಜ್ಯ ಮಟ್ಟದ ಚುಟುಕು ಕವಿಮೇಳದ ಸಮಾರೋಪದಲ್ಲಿ ವಿವಿಧ ಕ್ಷೇತ್ರದ ಸಾಧಕ ಗಣ್ಯರಿಗೆ ಸೇವಾಚೇತನ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಸಮಾಜದಲ್ಲಿ ಸುಶಿಕ್ಷಿತರು ಹೆಚ್ಚಾಗುತ್ತಿದ್ದರೂ ಮೌಢ್ಯತೆ ಹಾಗೂ ಕಂದಾಚಾರಗಳೂ ಕಡಿಮೆಯಾಗಿಲ್ಲ. ಇದಕ್ಕೆ ಸರಿಯಾಗಿ ದೇಶವನ್ನು ಆಳುವವರು ಜಾತಿವಾದವನ್ನು ಮುಂದಿಟ್ಟುಕೊಂಡು ಜಾತಿ ಜಾತಿಗಳ ರ್ಯಾಲಿ ನಡೆಸಿ ಸಮಾಜವನ್ನು ಒಡೆಯುತ್ತಿದ್ದಾರೆ. ಜತೆಯಲ್ಲಿ ಪ್ರಜಾಪ್ರಭುತ್ವ ಸಿದ್ಧಾಂತಕ್ಕೂ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ ಎಂದರು. ಪ್ರಶಸ್ತಿ: ಈ ಸಂದರ್ಭದಲ್ಲಿ ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಸಹಪ್ರಾಧ್ಯಾಪಕಿ ಡಾ. ವಿಜಯಕುಮಾರಿ ಎಸ್. ಕರಿಕಲ್, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಮಾನಸ, ರಂಗನಟ ನಿರ್ದೇಶಕ ನಾ. ನಾಗಚಂದ್ರ, ಬಿಇಒ ರಾಜಶೇಖರ್, ಸಮಾಜ ಸೇವಕ ವಿ. ಬಸವರಾಜು ಕಲ್ಕುಣಿಕೆ ಹಾಗೂ ನೇತ್ರತಜ್ಞೆ ಎಚ್.ಎಚ್. ಲತಾ ಅವರಿಗೆ 2014ನೇ ಸಾಲಿನ ಸೇವಾ ಚೇತನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಜಿಲ್ಲಾ ಕಸಾಪ ಅಧ್ಯಕ್ಷ ಎಂ. ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ನೆಲದನಿ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಡಾ.ವೈ.ಡಿ. ರಾಜಣ್ಣ, ಸ್ಪಂದನ ಪರಿಷತ್ತಿನ ಗೌರವಾಧ್ಯಕ್ಷ ಹಾಗೂ ಸಾಹಿತಿ ಟಿ.ಸತೀಶ್ ಜವರೇಗೌಡ, ಅಧ್ಯಕ್ಷ ಟಿ. ಲೋಕೇಶ್, ಕಾರ್ಯದರ್ಶಿ ಎ.ಎನ್. ಸತೀಶ್, ಉಪಾಧ್ಯಕ್ಷ ನಾಗರಾಜು, ಜಿಲ್ಲಾ ರೈತ ಸಂಘದ ಅಧ್ಯಕ್ಷ ಹೊಸೂರು ಕುಮಾರ್, ಚೆಸ್ಕಾಂ ಕಿರಿಯ ಎಂಜಿನಿಯರ್ ನಾಗರಾಜು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

