ಶ್ರೀಲಕ್ಷ್ಮೀಕಾಂತ ಜಾತ್ರೋತ್ಸವ
ನಂಜನಗೂಡು: ತಾಲೂಕಿನ ಕಳಲೆಯ ಶ್ರೀ ಲಕ್ಷ್ಮೀಕಾಂತ ಸ್ವಾಮಿ ರಥೋತ್ಸವವು ಗುರುವಾರ ವಿಜೃಂಭಣೆಯಿಂದ ನೆರವೇರಿತು.
ಶ್ರೀಲಕ್ಷ್ಮೀಕಾಂತ ಶ್ರೀಯವರ ದಿವ್ಯ ರಥಾರೋಹಣಕ್ಕೆ ತಾಲೂಕು ತಹಸೀಲ್ದಾರ್ ರಾಜೇಂದ್ರ ಚಾಲನೆ ನೀಡಿದರು.
ದೇವಸನ್ನಿಧಿಯ ಧಾರ್ಮಿಕ ಕೈಂಕರ್ಯಗಳನ್ನು ಪಾರುಪತ್ತೆಗಾರರಾದ ಜಯರಾಂ ನೆರೆವೇರಿಸಿ, ರಥೋತ್ಸವಕ್ಕೆ ಚಾಲನೆ ನೀಡಲು ಅನುವು ಮಾಡಿಕೊಟ್ಟರು.
ರಥೋತ್ಸವದಲ್ಲಿ ಮಾಜಿ ಸಚಿವ ಎಂ. ಮಹದೇವು, ಕಳಲೆ ಕೇಶವಮೂರ್ತಿ, ಗ್ರಾಪಂ ಅಧ್ಯಕ್ಷ ಮಹೇಶ್, ತಾಪಂ ಮಲ್ಲೇಶ್ ರಥ ಎಳೆದರು. ಭಕ್ತಾದಿಕಾರಿ ದೇವರಿಗೆ ಜಯಕಾರ ಕೂಗಿ, ಹಣ್ಣು ಜವನ ಎಸೆದು ಸ್ವಾಮಿಗೆ ಕೃತಾರ್ಥರಾದರು. ರಥೋತ್ಸದಲ್ಲಿ ಗಾರುಡಿ ಗೊಂಬೆ ಮತ್ತು ಹಲವು ಜಾನಪದ ಕಲಾವಿದರು ತಮ್ಮ ಕಲೆ ಪ್ರದರ್ಶಿಸಿದರು. ಹಲವು ಸಂಘ-ಸಂಸ್ಥೆಗಳು ಪಾನಕ, ಮಜ್ಜಿಗೆ ವಿತರಿಸಿದರು.
ಡಿವೈಎಸ್ಪಿ ಅವರ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ರಘು, ಗ್ರಾಮಾಂತರ ಪೊಲೀಸ್ ಸಿಬ್ಬಂದಿಯ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

