ಮೈಸೂರು

ಮಾತೆ ಮಹಾದೇವಿಗೆ ಇಂದು ಬಸವ ತತ್ವರತ್ನ ಬಿರುದು

Published On :

ಮೈಸೂರು: ಜಗಜ್ಯೋತಿ ಬಸವೇಶ್ವರ ತತ್ವಾದರ್ಶಗಳನ್ನು ಜಗತ್ತಿಗೆ ಸಾರಿದ ಕೂಡಲ ಸಂಗಮ ಧರ್ಮಪೀಠದ ಶ್ರೀ ಮಾತೆ ಮಹಾದೇವಿ ಅವರಿಗೆ ಗುರುವಂದನಾ ಕಾರ್ಯಕ್ರಮವನ್ನು ಮಾ.22 ಮತ್ತು 23 ರಂದು ರಾಮಾನುಜ ರಸ್ತೆಯಲ್ಲಿರುವ ರಾಜೇಂದ್ರ ಕಲಾಭವನದಲ್ಲಿ ಆಯೋಜಿಸಲಾಗಿದೆ. ಮಾ.22ರ ಸಂಜೆ 6ಕ್ಕೆ ನಡೆಯುವ ಗುರುವಂದನಾ ಕಾರ್ಯಕ್ರಮದಲ್ಲಿ ಮಹಾದೇವಿ ಅವರಿಗೆ ಬಸವ ತತ್ವರತ್ನ ಬಿರುದು ಪ್ರದಾನ ಮಾಡಲಾಗುವುದು. ಧರ್ಮಗುರುಗಳಾದ ಶ್ರೀ ಮಹದೇಶ್ವರ ಸ್ವಾಮೀಜಿ, ಮಾತೆ ಬಸವರತ್ನಾದೇವಿ, ಶ್ರೀ ಸದಾಶಿವ ಸ್ವಾಮೀಜಿ, ಶ್ರೀ ಶಾಂತವೀರೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಉದ್ಘಾಟಿಸಲಿದ್ದು, ಎಸ್‌ಐ ಪಿ. ರಮೇಶ್‌ಕುಮಾರ್, ವಕೀಲ ಬಿ.ನಟೇಶ್, ಡಿಸಿಪಿ ಎ.ಎನ್.ರಾಜಣ್ಣ, ಎಚ್.ಗಂಗಾಧರನ್, ಉದ್ಯಮಿ ಎಂ.ರಾಜೇಂದ್ರ, ಲಿಂಗಾಯತ ಮಹಾಸಭಾ ಅಧ್ಯಕ್ಷ ಕೆ.ಬಸವರಾಜಪ್ಪ ಅತಿಥಿಗಳಾಗಿ ಭಾಗವಹಿಸುವರು ಎಂದು ಧಾರವಾಡದ ಅಕ್ಕಮಹಾದೇವಿ ಅನುಭಾವಪೀಠದ ಶ್ರೀ ಮಾತೆ ಗಂಗಾದೇವಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.