ಮೈಸೂರು

ವೈದಿಕ ಕಾಲದಲ್ಲೇ ಇತ್ತು ನ್ಯಾನೋದ ಕರಾಮತ್ತು

Published On :

ಮೈಸೂರು: ವೈದಿಕ ಕಾಲದಿಂದಲೂ ನ್ಯಾನೋ ತಂತ್ರಜ್ಞಾನ ಬಳಕೆಯಲ್ಲಿದ್ದು, ಇದನ್ನು ಹೊಸದಾಗಿ ಸಂಶೋಧಿಸುತ್ತಿಲ್ಲ ಎಂದು ಮೈಸೂರು ವಿವಿ ಯುಪಿಇ- ಸಿಪಿಇಪಿಎ ಕಾರ್ಯಕ್ರಮದ ಮುಖ್ಯ ಸಂಯೋಜನಾಧಿಕಾರಿ ಪ್ರೊ.ಕೆ. ಭೈರಪ್ಪ ಹೇಳಿದರು.
ಊಟಿ ರಸ್ತೆಯಲ್ಲಿರುವ ಜೆಎಸ್‌ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಏರ್ಪಡಿಸಿರುವ ಎರಡು ದಿನಗಳ ಯುಜಿಸಿ ಪ್ರಾಯೋಜಿತ ಭೌತಿಕ ವಿಜ್ಞಾನ ಮತ್ತು ಎಂಜಿನಿಯರಿಂಗ್ ಕುರಿತ ವಿಚಾರ ಸಂಕಿರಣವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ನ್ಯಾನೋ ತಂತ್ರಜ್ಞಾನದಿಂದ ತಯಾರಿಸಿದ ಔಷಧದ ಚಹರೆಗಳು ನಮಗೆ ಲಭ್ಯವಾಗಿವೆ. ಇದಕ್ಕೆ ಆರು ಸಾವಿರ ವರ್ಷಗಳಷ್ಟು ಇತಿಹಾಸವಿದೆ. ಕ್ರಾಂತಿಕಾರಕ ಬದಲಾವಣೆಗಳಾಗಿರುವ ನ್ಯಾನೋ ತಂತ್ರಜ್ಞಾನ ಬಳಸಿಕೊಂಡು ಮಾನವ ಪರ್ಯಾಯ ವಸ್ತು ತಯಾರಿಸಲು ಸಾಧ್ಯವಾಗಿಲ್ಲ ಎಂದರು.
ಇತ್ತೀಚಿನ ದಿನಗಳಲ್ಲಿ ಬಗೆಹರಿಸಲು ಅಸಾಧ್ಯವಾಗಿರುವ ಎಷ್ಟೋ ಸಮಸ್ಯೆಗಳಿಗೆ ನ್ಯಾನೋ ಪರಿಹಾರ ಒದಗಿಸಬಲ್ಲದು. ನೋಟುಗಳು ಹಾಳಾಗದಂತೆ ಜಿಂಕ್ ಆಕ್ಸೈಡ್ ಬಳಸುವುದು, ಹೈಡ್ರೋಫೋಬಿಕ್ ಲೇಪಿತ ನೋಟುಗಳನ್ನು ನೀರಿಗೆ ಹಾಕಿದರು ಒದ್ದೆಯಾಗದಿರುವುದು, ಜತೆಗೆ ನೂರಾರು ವರ್ಷಗಳಷ್ಟು ಹಾಳಾಗದಂತೆ ತಡೆಯಲು ತಂತ್ರಜ್ಞಾನ ಅಭಿವೃದ್ಧಿಯಾಗಿದೆ. ನಮ್ಮ ನೆರೆಯ ರಾಷ್ಟ್ರವಾದ ಚೀನಾದಲ್ಲಿ ಈ ತಂತ್ರಜ್ಞಾನ ಬಳಕೆಯಲ್ಲಿದೆ ಎಂದು ಅವರು ಮಾಹಿತಿ ನೀಡಿದರು.
ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜು ವಿಭಾಗದ ನಿರ್ದೇಶಕ ಪ್ರೊ.ಟಿ.ಡಿ. ಸುಬ್ಬಣ್ಣ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರೊ.ಬಿ.ವಿ. ಸಾಂಬಶಿವಯ್ಯ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವಿಜಯ ಮಂಜುನಾಥ ಗುರು ಇದ್ದರು. ಪ್ರಾಂಶುಪಾಲ ಪ್ರೊ.ಎಂ.ಬಿ. ಮಲ್ಲಿಕಾರ್ಜುನ ಪಂಡಿತ್ ಸ್ವಾಗತಿಸಿದರು. ಶ್ವೇತಾ ಕಶ್ಯಪ್ ಪ್ರಾರ್ಥಿಸಿದರು. ಮೀನಾಕ್ಷಿ ಗಿರಿಧರ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.