ಮೈಸೂರು

ಸುದ್ದಿ ಸಂಕ್ಷೇಪ

Published On :

ನಗರಕ್ಕೆ ಸೋಮಣ್ಣ
ಮೈಸೂರು: ಮಾಜಿ ಸಚಿವ ವಿ.ಸೋಮಣ್ಣ ಶನಿವಾರ ಮೈಸೂರಿಗೆ ಭೇಟಿ ನೀಡುವರು. ಬೆಳಗ್ಗೆ 8.30ಕ್ಕೆ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಮತ್ತು ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎ.ಆರ್. ಕೃಷ್ಣಮೂರ್ತಿ ಅವರೊಂದಿಗೆ ಸುತ್ತೂರು ಮಠಕ್ಕೆ ತೆರಳಿ ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆಯುವರು. ಸಂಜೆ 5.30ಕ್ಕೆ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಮೈಸೂರಿನ ಕ್ಯಾತಮಾರನಹಳ್ಳಿಯ ಹುಲಿಯಮ್ಮನ ದೇವಸ್ಥಾನ ಸಮೀಪದಿಂದ ಪಾದಯಾತ್ರೆ ಮೂಲಕ ಚುನಾವಣಾ ಪ್ರಚಾರ ಕೈಗೊಳ್ಳುವರು.
ಇಂದು ತರಬೇತಿ
ಲೋಕಸಭಾ ಚುನಾವಣೆಯ ಸೆಕ್ಟರ್ ಅಧಿಕಾರಿ, ಫ್ಲೈಯಿಂಗ್ ಸ್ಕ್ವಾಡ್‌ನ ಸಿಬ್ಬಂದಿಗೆ ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಮಾ.22ರ ಬೆಳಗ್ಗೆ 10.30ಕ್ಕೆ ತರಬೇತಿ ಏರ್ಪಡಿಸಲಾಗಿದೆ ಎಂದು ಪಾಲಿಕೆ ಆಯುಕ್ತ ಪಿ.ಜಿ. ರಮೇಶ್ ತಿಳಿಸಿದ್ದಾರೆ.
ಆರೋಪಿ ಸೆರೆ
ನಕಲಿ ದಾಖಲೆ ಸೃಷ್ಟಿಸಿ ಎಂಡಿಎಗೆ ವಂಚಿಸಿದ್ದ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಹೆಬ್ಬಾಳಿನ ನಿವಾಸಿ ಕುಮಾರ್ ಬಂಧಿತ ಆರೋಪಿ. ಈತ ಹೆಬ್ಬಾಳು ಬಡಾವಣೆ ನಿರ್ಮಾಣದ ವೇಳೆ ಎಂಡಿಎಗೆ ತನ್ನ ಜಮೀನು ಮಾರಿ, ಅದಕ್ಕೆ ಪ್ರತಿಯಾಗಿ ಪರಿಹಾರವನ್ನು ತೆಗೆದುಕೊಂಡಿದ್ದ. ಆ ನಂತರ ನಕಲಿ ದಾಖಲೆ ಸೃಷ್ಟಿಸಿ ನಿವೇಶನಗಳನ್ನಾಗಿ ಪರಿವರ್ತಿಸಿ ಕೆಲವರಿಗೆ ಮಾರಾಟ ಮಾಡಿದ್ದ. ಕಳೆದ ವರ್ಷ ಎಂಡಿಎ ಅಧಿಕಾರಿಗಳು ಸ್ಥಳ ಪರಿಶೀಲಿಸಿ ತನ್ನ ಸ್ವಾಧೀನದ ನಿವೇಶನದಲ್ಲಿ ನಿರ್ಮಿಸಿದ್ದ ಮನೆ ತೆರವುಗೊಳಿಸಿ, ಆರೋಪಿ ಕುಮಾರ್ ವಿರುದ್ಧ ವಿಜಯನಗರ ಪೊಲೀಸರಿಗೆ ದೂರು ನೀಡಿದ್ದರು. ತಲೆ ಮರೆಸಿಕೊಂಡಿದ್ದ ಕುಮಾರ್‌ನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
ತನಿಖೆ ಚುರುಕು
ಇಲವಾಲ ಪೊಲೀಸರು ಕೇರಳ ಮೂಲಕ ವ್ಯಾಪಾರಿಯಿಂದ 2 ಕೋಟಿ ಹಣ ಲಪಟಾಯಿಸಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸಿಐಡಿ ಡಿವೈಎಸ್ಪಿ ರಾಘವೇಂದ್ರ ಭಟ್ ನೇತೃತ್ವದ ತಂಡ ಕಳೆದ ಮೂರು ದಿನಗಳಿಂದ ನಗರದಲ್ಲಿಯೆ ಬೀಡು ಬಿಟ್ಟಿತ್ತು. ಶುಕ್ರವಾರ ಎಸ್‌ಐ ಜಗದೀಶ್ ಮತ್ತು ಪೇದೆ ಅಶೋಕ್ ನಿವಾಸಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಪೇದೆ ಅಶೋಕ್ ಮನೆಗೆ ಬೀಗ ಹಾಕಲಾಗಿತ್ತು. ಅವರ ಪತ್ನಿಯನ್ನು ಸಂಪರ್ಕಿಸಿದಾಗ ಕಾರ್ಯಕ್ರಮಕ್ಕೆ ಹೋಗಿದ್ದು, ಸ್ವಲ್ಪದರಲ್ಲೆ ಬರುವುದಾಗಿ ತಿಳಿಸಿದ್ದಾರೆ. ಸಂಜೆ 5.30 ರವರೆಗೂ ಕಾದ ಸಿಐಡಿ ಅಧಿಕಾರಿಗಳು ಬಾಗಿಲಿಗೆ ನೋಟಿಸ್ ಅಂಟಿಸಿ ಹೋಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.