ಮೈಸೂರು

ಜನಪರ ಯೋಜನೆಗಳೇ ಗೆಲವಿಗೆ ಶ್ರೀರಕ್ಷೆ: ಸತೀಶ್

Published On :

ಪಿರಿಯಾಪಟ್ಟಣ: ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಯೋಜನೆಗಳೇ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರೀರಕ್ಷೆ ಎಂದು ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಸಂಸದ ಎಚ್. ವಿಶ್ವನಾಥ್ ಅವರ ಕೊಡುಗೆ ಕಾಂಗ್ರೆಸ್‌ಗೆ ಅಪಾರವಾಗಿದ್ದು, ಸಂದಿಗ್ದ ಪರಿಸ್ಥಿತಿಯಲ್ಲಿಯೂ ಪಕ್ಷಕ್ಕೆ ಬೆನ್ನೆಲುಬಾಗಿ ನಿಂತ ವ್ಯಕ್ತಿಯಾಗಿದ್ದಾರೆ. ಪ್ರತಿಯೊಬ್ಬರೂ ವಿಶ್ವನಾಥ್ ಅವರಿಗೆ ಮತ ನೀಡುವಂತೆ ಮನವಿ ಮಾಡಿದರು.
ಸಂಸದ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಚ್.ವಿಶ್ವನಾಥ್ ಮಾತನಾಡಿ, ತಂಬಾಕು ಮತ್ತು ಕಾಫಿ ಬೆಳೆಗಾರರಿಗೆ 760 ಕೋಟಿ ವಿಶೇಷ ಪ್ಯಾಕೇಜ್ ನೀಡಲಾಗಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಎಂಬುದನ್ನು ರೈತರು ಮರೆತಿಲ್ಲ.
ಸದಾನಂದಗೌಡರು ಸಂಸದರಾಗಿ ಎಷ್ಟು ಬಾರಿ ಸಾರ್ವಜನಿಕರನ್ನು ಭೇಟಿ ಮಾಡಿದ್ದಾರೆ. ಕೊಡಗಿನ ಕಾಫಿ ಬೆಳೆಗಾರರ ಸಮಸ್ಯೆಗೆ ಸ್ಪಂದಿಸಿದ್ದಾರೆ ಎಂಬುದನ್ನು ಮಾಜಿ ಶಾಸಕ ಮೇದಪ್ಪ ಚರ್ಚೆಗೆ ಮುಂದಾಗಬೇಕು ಹಾಗೂ ಇನ್ನೊಬ್ಬರನ್ನು ಟೀಕಿಸುವಾಗ ಎಚ್ಚರದಿಂದಿರಬೇಕು. ತಂಬಾಕು ಮಾರುಕಟ್ಟೆಯಲ್ಲಿ ಇ-ಹರಾಜು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ.
ಇದರಿಂದ ರೈತರಿಗೆ ಉತ್ತಮ ಬೆಲೆ ಸಿಕ್ಕಿರುವುದರ ಜೊತೆಗೆ, ಸಾಮಾಜಿಕ ನ್ಯಾಯವೂ ಸಿಕ್ಕಿದಂತಾಗಿದೆ. ತಂಬಾಕು ಬೆಳೆಗಾರರಿಗೆ 470 ಕೋಟಿ ವಿಶೇಷ ಪ್ಯಾಕೇಜ್ ನೀಡಲಾಗಿದೆ ಎಂದು ಹೇಳಿದರು.ಶಾಸಕ ಕೆ. ವೆಂಕಟೇಶ್, ಮಾಜಿ ಶಾಸಕ ಎಚ್.ಸಿ. ಬಸವರಾಜ್ ಮಾತನಾಡಿದರು. ಜಿಪಂ ಸದಸ್ಯೆ ಕಾವೇರಿ ಶೇಖರ್, ಪಪಂ ಅಧ್ಯಕ್ಷೆ ರತ್ನಾ, ಉಪಾಧ್ಯಕ್ಷ ಅಬ್ದುಲ್ ಅಜೀಜ್, ಕೆಪಿಸಿಸಿ ಸದಸ್ಯರಾದ ಡಿ.ಟಿ. ಸ್ವಾಮಿ, ಕೋಟೆಹುಂಡಿ ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಾನ್ಸೂನ್ ಚಂದ್ರು, ಕುಂಜಪ್ಪಕಾರ್ನಾಡ್, ಜಿಪಂ ಮಾಜಿ ಅಧ್ಯಕ್ಷ ಬಸವರಾಜ್, ಎಂಡಿಎ ಮಾಜಿ ಅಧ್ಯಕ್ಷ ಗೋವಿಂದರಾಜು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.