ಪ್ರಾದೇಶಿಕ ಪಕ್ಷಗಳು ನೀತಿ ಬದಲಿಸಿಕೊಳ್ಳಲಿ
ಮೈಸೂರು: ಯುಪಿಎ ಹಾಗೂ ಎನ್ಡಿಎ ನೀತಿ ಒಂದೆಯಾಗಿದ್ದು, ಪ್ರಾದೇಶಿಕ ಪಕ್ಷಗಳು ಪರ್ಯಾಯ ನೀತಿ ಅನುಸರಿಸಬೇಕಿದೆ. ತಮ್ಮ ನೀತಿಯನ್ನು ಬದಲಿಸಿಕೊಳ್ಳುವುದು ಅನಿವಾರ್ಯ ಎಂದು ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ವಿ.ಜೆ.ಕೆ. ನಾಯರ್ ಹೇಳಿದರು.
ನಗರದಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ವಾದಿ) ಜಿಲ್ಲಾ ಸಂಘಟನಾ ಸಮಿತಿಯು ಸೋಮವಾರ ಆಯೋಜಿಸಿದ್ದ ಪರಿಣಾಮಕಾರಿ ಬದಲಿ ರಾಜಕಾರಣ- ನೇತಾ ಬದಲಾವಣೆಯಿಂದಲೋ ನೀತಿ ಬದಲಾವಣೆಯಿಂದಲೋ ಎಂಬ ವಿಷಯ ಕುರಿತ ರಾಜಕೀಯ ಸಮಾವೇಶದಲ್ಲಿ ಅವರು ಮಾತನಾಡಿದರು.
ಒಟ್ಟು ಮತದಾನದ ಪೈಕಿ ಮೂರನೇ ಒಂದು ಭಾಗದಷ್ಟು ಮತಗಳನ್ನು ಪ್ರಾದೇಶಿಕ ಪಕ್ಷಗಳು ಪಡೆಯಲಿವೆ. ಇದರಿಂದ ನಿರೀಕ್ಷಿತ ಸ್ಥಾನಗಳು ಜಾತ್ಯತೀತ, ಎಡಪಕ್ಷಗಳ ಪಾಲಿಗೆ ಬರಲಿವೆ. ಹೀಗಾಗಿ ಪ್ರಾದೇಶಿಕ ಪಕ್ಷಗಳು ತಮ್ಮ ನೀತಿ ಬದಲಿಸಿಕೊಳ್ಳಬೇಕಿದೆ.
ಈಗಿನ ಮಾಹಿತಿ ಪ್ರಕಾರ ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವು 160 ರಿಂದ 170 ಹಾಗೂ ಯುಪಿಎ ಗರಿಷ್ಠ 100 ಸ್ಥಾನ ಗಳಿಸುವ ಸಾಧ್ಯತೆ ಇದೆ. ಉಳಿದ ಸ್ಥಾನಗಳು ಜಾತ್ಯತೀತ, ಎಡಪಂಥೀಯ ನಿಲುವು ಹೊಂದಿರುವ ಪಕ್ಷಗಳಿಗೆ ದಕ್ಕುವ ಸಾಧ್ಯತೆ ಹೆಚ್ಚಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಸಿವಿನ ಪ್ರಮಾಣ ಹೆಚ್ಚಳ: ಬಿಜೆಪಿ ಮತ ಪಡೆಯುವ ಪ್ರದೇಶಗಳಲ್ಲಿ ಹಸಿವಿನ ಪ್ರಮಾಣ ಹೆಚ್ಚಾಗಿದೆ. ಗುಜರಾತ್ ಮಾದರಿ ಎಂದು ಬೊಬ್ಬೆ ಹೊಡೆಯುವವರು, ಅಲ್ಲಿನ ಅವ್ಯವಸ್ಥೆ ಬಗ್ಗೆ ಹೋಗಿ ಪರಿಶೀಲಿಸಿದಾಗ ಸತ್ಯ ಗೊತ್ತಾಗುತ್ತದೆ. ಧರ್ಮ ಉಳಿಸುವ ನೆಪದಲ್ಲಿ ಕೋಮುಗಲಭೆ ಸೃಷ್ಟಿಸಲಾಗುತ್ತಿದೆ. ಭೂ ಸುಧಾರಣಾ ಕಾಯ್ದೆ ಸರಿಯಾಗಿ ಅನುಷ್ಠಾನವಾಗಿಲ್ಲ ಎಂದು ಆರೋಪಿಸಿದರು.
ರಾಜ್ಯದ ಚಿಕ್ಕಬಳ್ಳಾಪುರ ಹಾಗೂ ಮಂಗಳೂರು ಕ್ಷೇತ್ರದಲ್ಲಿ ಸಿಪಿಎಂ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದರು. ಸಿಪಿಎಂ ಜಿಲ್ಲಾ ಸಂಘಟನಾ ಸಮಿತಿ ಸದಸ್ಯ ಜಿ.ಜಯರಾಮ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಕೆ. ಬಸವರಾಜ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

