ಮಂಜುನಾಥನ ದರುಶನಕ್ಕೆ ವಿಶ್ವನಾಥ
ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಎಚ್. ವಿಶ್ವನಾಥ್ ಸೋಮವಾರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನಕ್ಕೆ ತೆರಳಿದರು. ಕಾಂಗ್ರೆಸ್ ಹಿರಿಯ ನಾಯಕ ಸಿ.ಕೆ. ಜಾಫರ್ ಷರೀಫ್ ಅವರು ಜೆಡಿಎಸ್ ಸೇರಿ, ಅಭ್ಯರ್ಥಿಯಾಗಲಿದ್ದಾರೆ ಎಂಬ ಊಹಾಪೋಹಗಳಿಂದ ಅಲ್ಪಸಂಖ್ಯಾತರ ಮತಗಳು ಕೈಬಿಟ್ಟು, ಫಲಿತಾಂಶ ಏರುಪೇರಾಗಬಹುದು ಎಂದು ಹತಾಶರಾಗಿದ್ದ ವಿಶ್ವನಾಥ್, ಈಗ ನಿರಾಳರಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ವಿಶ್ವನಾಥ್, ಧರ್ಮಸ್ಥಳಕ್ಕೆ ಹೋಗಿ ಬರುವುದಾಗಿ ತಿಳಿಸಿದರು. ಯಾರೇ ಸ್ಪರ್ಧಿಸಲಿ, ಬಿಡಲಿ ಚುನಾವಣೆ ಮುಗಿಯುವ ತನಕ ಎಚ್ಚರಿಕೆಯಿಂದ ಹಾಗೂ ಶ್ರಮವಹಿಸಿ ಪ್ರಚಾರ ಮಾಡಬೇಕು. ಯಾವುದೇ ಅಭ್ಯರ್ಥಿಯನ್ನು ಲಘುವಾಗಿ ತೆಗೆದುಕೊಳ್ಳಬಾರದು ಎಂದು ಸಿದ್ದರಾಮಯ್ಯ ಅವರು ವಿಶ್ವನಾಥ್ ಅವರಿಗೆ ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಸಹಕಾರ ಸಚಿವ ಎಚ್. ವಿಶ್ವನಾಥ್, ಶಾಸಕರಾದ ತನ್ವೀರ್ ಸೇಠ್, ಎಂ.ಕೆ. ಸೋಮಶೇಖರ್, ಆರ್. ಧರ್ಮಸೇನ, ಎಚ್.ಪಿ. ಮಂಜುನಾಥ್, ಎಂಡಿಎ ಮಾಜಿ ಅಧ್ಯಕ್ಷರಾದ ಸಿ. ಬಸವೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

