ಮೋದಿ ಪಿಎಂ ಆದ್ರೆ, ಬಿಎಸ್ವೈ ಕೃಷಿ ಮಂತ್ರಿ
ಟಿ. ನರಸೀಪುರ: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ಕೃಷಿ ಮಂತ್ರಿಯಾಗಲಿದ್ದಾರೆ ಎಂದು ಮಾಜಿ ಸಚಿವ ವಿ. ಸೋಮಣ್ಣ ಭವಿಷ್ಯ ನುಡಿದರು.
ತಾಲೂಕಿನ ಮೂಗೂರು ಗ್ರಾಮದಲ್ಲಿ ಪಾದಯಾತ್ರೆ ಮಾಡಿ, ಜೆಡಿಎಸ್ ಮುಖಂಡರನ್ನು ಭೇಟಿ ಮಾಡಿ ಬಿಜೆಪಿಗೆ ಮರಳುವಂತೆ ಮನವೊಲಿಸಿ ಮಾತನಾಡಿದ ಅವರು, ರೈತ ಪರ ಹೋರಾಟದಿಂದ ರಾಜಕೀಯ ಆರಂಭಿಸಿದ ಯಡಿಯೂರಪ್ಪ ಅವರು ಮುಂದಿನ ಬಿಜೆಪಿ ಸರ್ಕಾರದಲ್ಲಿ ಕೃಷಿ ಸಚಿವರಾಗುವರು. ಎಲ್ಲರೂ ಒಗ್ಗೂಡಿ ಬಿಜೆಪಿ ಗೆಲುವಿಗೆ ಶ್ರಮಿಸಬೇಕೆಂದು ಕರೆ ನೀಡಿದರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿ, ಪಕ್ಷಕ್ಕೆ ಮರಳಲು ಎಪಿಎಂಸಿ ಮಾಜಿ ಅಧ್ಯಕ್ಷ ಎಂ. ಚಂದ್ರಶೇಖರ್, ಗ್ರಾಪಂ ಅಧ್ಯಕ್ಷ ಜಗದೀಶ್ಮೂರ್ತಿ ಹಾಗೂ ಹಿರಿಯ ಮುಖಂಡ ಎಂ.ಎಂ. ಬಸವಣ್ಣ ಒಲವು ವ್ಯಕ್ತಪಡಿಸಿದರು.
ಮಾಜಿ ಸಚಿವ ವಿ.ಸೋಮಣ್ಣ ಅವರು ಭೇಟಿ ಮಾಡಿ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ಕೋರಿದ್ದಕ್ಕೆ ಸಹಮತ ವ್ಯಕ್ತಪಡಿಸಿದ ಮುಖಂಡರು ಚಾಮರಾಜನಗರ ಅಭ್ಯರ್ಥಿ ಎ.ಆರ್. ಕೃಷ್ಣಮೂರ್ತಿ ಅವರ ಗೆಲುವಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂಬ ಭರವಸೆ ನೀಡಿದರು. ಮುಖಂಡ ಗೌಡ್ರು ಪ್ರಕಾಶ್ ಸೇರಿದಂತೆ ಸ್ಥಳೀಯ ಕಾರ್ಯಕರ್ತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

