ಲೋಕಸಭಾ ಚುನಾವಣೆ ಹಿನ್ನೆಲೆ: ಮತದಾರರಲ್ಲಿ ಜಾಗೃತಿ ಜಾಥಾ
ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ವೈದ್ಯಕೀಯ ಕಾರ್ಯಕರ್ತರು ಸೋಮವಾರ ಮತದಾರರ ಜಾಗೃತಿ ಜಾಥಾ ನಡೆಸಿದರು. ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ ಮೈಸೂರು ಸರ್ಕಾರಿ ವೈದ್ಯಕೀಯ ಕಾಲೇಜು ಮುಂಭಾಗ ಏರ್ಪಡಿಸಿದ್ದ ಜಾಥಾವನ್ನು ಡಿಎಚ್ಒ ಡಾ. ಎಚ್. ಟಿ. ಪುಟ್ಟಸ್ವಾಮಿ ಉದ್ಘಾಟಿಸಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಸಂದೀಪ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎನ್.ಆರ್. ವಿಜಯ್ ಇದ್ದರು.
ಏ. 17 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ನಾಗರಿಕರು ತಪ್ಪದೆ ಮತ ಚಲಾಯಿಸಿ ಎನ್ನುವ ಸಂದೇಶಗಳೊಂದಿಗೆ ಏರ್ಪಡಿಸಿದ್ದ ಈ ಜಾಥಾದಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜು, ಶಾಂತವೇರಿ ಗೋಪಾಲಗೌಡ ನರ್ಸಿಂಗ್ ಕಾಲೇಜು, ಕಾವೇರಿ ನರ್ಸಿಂಗ್ ಕಾಲೇಜು, ಬಿಎಂಎಚ್ ನರ್ಸಿಂಗ್ ಕಾಲೇಜ್, ಬಿಜಿಎಸ್ ಅಪೊಲೋ ನರ್ಸಿಂಗ್ ಕಾಲೇಜು ಮತ್ತಿತರ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಮೆರವಣಿಗೆಯು ಸಯ್ಯಾಜಿರಾವ್ ರಸ್ತೆ ಮುಖಾಂತರ ಪ್ರಭಾಚಿತ್ರ ಮಂದಿರ, ಗಾಂಧಿ ವೃತ್ತ, ದೊಡ್ಡ ಗಡಿಯಾರ, ಅಶೋಕರಸ್ತೆ, ಮುಖ್ಯ ಅಂಚೆ ಕಚೇರಿ ವೃತ್ತ, ಗ್ರಾಮಾಂತರ ಬಸ್ ನಿಲ್ದಾದ ರಸ್ತೆಯಲ್ಲಿ ಸಾಗಿ ಡಿಎಚ್ಒ ಕಾರ್ಯಾಲಯ ಬಳಿ ಅಂತ್ಯಗೊಂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

