ಮೈಸೂರು

ಆರೋಗ್ಯ ದರ್ಶನ ಕೃತಿ ಬಿಡುಗಡೆ

Published On :

ಮೈಸೂರು: ಆರೋಗ್ಯ ಯೋಗ ಸಂಸ್ಥೆ ಮಾ. 27ರ ಬೆಳಗ್ಗೆ 10.30ಕ್ಕೆ ನಾದಬ್ರಹ್ಮ ಸಂಗೀತ ಸಭಾದಲ್ಲಿ ಡಾ.ಎಸ್.ಪಿ. ಯೋಗಣ್ಣ ಅವರ ಸಮಗ್ರ ಆರೋಗ್ಯ ದರ್ಶನ ಗ್ರಂಥ ಲೋಕಾರ್ಪಣೆ ಸಮಾರಂಭ ಏರ್ಪಡಿಸಿದೆ. ಆದಿಚುಂಚನಗಿರಿ ಶಾಖಾ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ರಾಮಕೃಷ್ಣ ಆಶ್ರಮದ ಮುಕ್ತಿದಾನಂದಜಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್, ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕೃತಿ ಕುರಿತು ಸಾಹಿತಿ ಡಾ.ನಾ. ಸೋಮೇಶ್ವರ ಮಾತನಾಡುವರು ಎಂದು ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಪ್ರೊ.ನೀ.ಗಿರಿಗೌಡ  ಸುದ್ದಿಗೋಷ್ಠಿಯಲ್ಲಿ ಹೇಳಿದರು. ಈ ಕೃತಿಯಲ್ಲಿ ಆಧ್ಯಾತ್ಮಿಕ ಆರೋಗ್ಯವನ್ನು ವಿಶ್ಲೇಷಿಸಿ, ಆಧ್ಯಾತ್ಮಿಕ ಆರೋಗ್ಯಕ್ಕೆ ಹೊಸ ಆಯಾಮ, ನಿರೂಪಣೆ ಮತ್ತು ತಾತ್ವಿಕ ರೂಪುರೇಷೆಗಳನ್ನು ಪ್ರಥಮ ಬಾರಿಗೆ ಸಾದರಪಡಿಸಲಾಗಿದೆ ಎಂದು ಡಾ.ಎಸ್.ಪಿ. ಯೋಗಣ್ಣ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.