ಮೈಸೂರು

ಜಾರಕಿಹೊಳಿ ವಿರುದ್ಧದ ಹೇಳಿಕೆಗೆ ಖಂಡನೆ

Published On :

ಮೈಸೂರು: ಸಂಪುಟ ದರ್ಜೆ ಸಚಿವರಾದ ಸತೀಶ್ ಜಾರಕಿಹೊಳಿ ಅವರು ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಕಾಂಗ್ರೆಸ್ ಪರ ಮತಯಾಚಿಸುವುದನ್ನು ಯಾವುದೇ ಸಂಘಟನೆ ಅಥವಾ ವ್ಯಕ್ತಿ ಪ್ರಶ್ನಿಸುವಂತಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ.ಪಂಗಡ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎನ್. ಅನಿಲ್‌ಕುಮಾರ್ ತಿಳಿಸಿದರು. ಜಾರಕಿಹೊಳಿ ನಾಯಕ ಜನಾಂಗದ ಪ್ರಮುಖರಾಗಿದ್ದು, ಎರಡು ದಶಕಗಳಿಂದ ಜನಾಂಗದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ನಾಯಕ ಜನಾಂಗದವರಲ್ಲದೆ ಇತರೆ ಹಿಂದುಳಿದ ಹಾಗೂ ಮೇಲ್ವರ್ಗದ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಅವರು ಮೈಸೂರು ಭಾಗದಲ್ಲಿ ಪ್ರಚಾರ ಕೈಗೊಂಡು ನಾಯಕ ಜನಾಂಗದ ಮತಗಳ ದಿಕ್ಕು ತಪ್ಪಿಸುತ್ತಾರೆ ಎಂಬ ಜಿಲ್ಲಾ ನಾಯಕರ ಯುವ ವೇದಿಕೆ ಹೇಳಿಕೆಯ ಹಿಂದೆ ರಾಜಕೀಯ ಪಕ್ಷಗಳ ಕೈವಾಡ ಇದೆ ಎಂದು ಆರೋಪಿಸಿದರು.
ಅಲ್ಲದೆ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಪರಿವಾರ ಮತ್ತು ತಳವಾರ ಪದಗಳನ್ನು ಪ.ಪಂಗಡಕ್ಕೆ ಸೇರಿಸಿದೆ. ಆದರೂ ಜಾರಕಿಹೊಳಿ ಅವರ ವಿರುದ್ಧ ಇಂಥ ಹೇಳಿಕೆ ನೀಡಬಾರದು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.