ಪ್ರತಾಪ್ ಪ್ರಚಾರಕ್ಕೆ ಸಹಕರಿಸಿ: ರಾಮದಾಸ್
ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರು ಮಾ.27 ರಂದು ಕೆ.ಆರ್. ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳಲಿದ್ದು, ಕಾರ್ಯಕರ್ತರೆಲ್ಲರೂ ಅವರಿಗೆ ಸಂಪೂರ್ಣ ಬೆಂಬಲ ನೀಡಬೇಕು ಎಂದು ಮಾಜಿ ಸಚಿವ ಎಸ್.ಎ. ರಾಮದಾಸ್ ಕಾರ್ಯಕರ್ತರಿಗೆ ಕರೆ ನೀಡಿದರು.
ತಮ್ಮ ನಿವಾಸದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ಮೂರು ಹಂತಗಳಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಬೇಕಿದೆ. ಮಾ.27 ರಂದು ಪ್ರತಾಪ್ ಸಿಂಹ ಅವರು ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 8ಕ್ಕೆ ಶ್ರೀರಾಂಪುರದಿಂದ ಪ್ರಚಾರ ಆರಂಭಿಸಿ ರಾತ್ರಿ 9 ರವರೆಗೂ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ಮಾಡುವುದಾಗಿ ತಿಳಿಸಿದರು.
ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂ.13, 14, 15, 17, 18, 21, 22ನೇ ವಾರ್ಡ್ಗಳಲ್ಲಿ ಮನೆ ಮನೆ ಭೇಟಿ ಮಾಡಲಿದ್ದು, ಸಂಜೆ 5.30ಕ್ಕೆ ಶಂಕರಮಠದಲ್ಲಿ ನಡೆಯುವ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವರು. ಚುನಾವಣಾ ಪ್ರಚಾರದ ಮೊದಲ ಹಂತವಾಗಿ ಪ್ರತಾಪ್ ಸಿಂಹ ಅವರ ವೈಯಕ್ತಿಕ ಪರಿಚಯದ ಕರಪತ್ರವನ್ನು ಮನೆ ಮನೆಗೆ ತಲುಪಿಸುವುದು, ಎರಡನೇ ಹಂತದಲ್ಲಿ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಾರಿಗೊಳಿಸುವ ಯೋಜನೆ ಮತ್ತು ಕಳೆದ 10 ವರ್ಷದಲ್ಲಿನ ಯುಪಿಎ ಸರ್ಕಾರದ ವೈಫಲ್ಯವನ್ನು ಮತದಾರರಿಗೆ ತಿಳಿಸಬೇಕು. ಮೂರನೆ ಹಂತದಲ್ಲಿ ಮತದಾರರಿಗೆ ಅಗತ್ಯವಾದ ಗುರುತಿನ ಚೀಟಿಯ ಕ್ರಮಸಂಖ್ಯೆಯನ್ನು ಮನೆ ಮನೆಗೆ ತಲುಪಿಸಬೇಕು ಎಂದು ಕಿವಿಮಾತು ಹೇಳಿದರು.
ಚುನಾವಣಾ ಪ್ರಚಾರದ ವೇಳೆ ಪಾಲಿಕೆ ಸದಸ್ಯರು, ಆಯಾ ವಾರ್ಡ್ನ ಪ್ರಮುಖರು ಜೊತೆಯಲ್ಲಿರಬೇಕು ಎಂದರು. ಸಭೆಯಲ್ಲಿ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೋಮಸುಂದರ್, ಕೆ.ಆರ್. ಕ್ಷೇತ್ರದ ಎಲ್ಲಾ ವಾರ್ಡ್ನ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಗರ ಪಾಲಿಕೆ ಸದಸ್ಯರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

