ಮೈಸೂರು

ಬೆಂಕಿಗೆ ಲಕ್ಷಾಂತರ ಮೌಲ್ಯದ ವಸ್ತು ಭಸ್ಮ

Published On :

ಮೈಸೂರು: ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರು. ಮೌಲ್ಯದ ವಸ್ತುಗಳು ಭಸ್ಮವಾಗಿರುವ ಘಟನೆ ನಗರದ ಗಾಂಧಿಚೌಕದ ಬಳಿ ಮಂಗಳವಾರ ಬೆಳಗಿನ ಜಾವ ನಡೆದಿದೆ. ಮಹದೇಶ್ವರ ಟ್ರಾನ್ಸ್‌ಪೋರ್ಟ್ ಮತ್ತು ಪಾರ್ಸಲ್ ಎಂಬ ಸಂಸ್ಥೆಯಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ. ಗ್ರಾಮೀಣ ಪ್ರದೇಶಕ್ಕೆ ವಿವಿಧ ವಸ್ತುಗಳನ್ನು ಈ ಸಂಸ್ಥೆಯ ಮೂಲಕ ಸಾಗಿಸಲಾಗುತ್ತಿತ್ತು. ಬೆಳಗಿನ ಜಾವ 2 ರಷ್ಟರಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ಸಂಗ್ರಹಿಸಲಾಗಿದ್ದ ಬಟ್ಟೆಗಳು, ಪ್ಲಾಸ್ಟಿಕ್ ವಸ್ತುಗಳು, ಎಲೆಕ್ಟ್ರಾನಿಕ್ಸ್ ವಸ್ತುಗಳು ಸೇರಿದಂತೆ ಹಲವಾರು ವಸ್ತುಗಳು ಸುಟ್ಟು ಭಸ್ಮವಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದೆ.ಸುಮಾರು 10 ಲಕ್ಷ ನಷ್ಟವಾಗಿದೆ ಎಂದು ಸಂಸ್ಥೆಯ ಮಾಲೀಕ ಬಸವರಾಜು ಪೊಲೀಸರಿಗೆ ದೂರು ನೀಡಿದ್ದಾರೆ.
ಯುವತಿ ನಾಪತ್ತೆ
ಮೈಸೂರು: ಪಡುವಾರಹಳ್ಳಿ (ವಿನಾಯಕ ನಗರ) ನಿವಾಸಿ ಮಂಟೇಸ್ವಾಮಿ ಎಂಬವರ ಪುತ್ರಿ ರಾಜೇಶ್ವರಿ (18) ಗುರುವಾರದಿಂದ ನಾಪತ್ತೆಯಾಗಿದ್ದಾರೆ. ವಿವಿ ಮೊಹಲ್ಲಾದಲ್ಲಿರುವ ಲಾಯಲ್ ವರ್ಲ್ಡ್‌ಗೆ ಕೆಲಸಕ್ಕೆ ಹೋದ ಪುತ್ರಿ ರಾಜೇಶ್ವರಿ ವಾಪಸ್ ಮನೆಗೆ ಬಾರದೆ ಕಾಣೆಯಾಗಿದ್ದಾಳೆ. ಚಹರೆ- 4.8 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ಕನ್ನಡ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ಸಿಕ್ಕಲ್ಲಿ ದೂ. 0821- 2418314 ಸಂಪರ್ಕಿಸಲು ಎಸ್‌ಐ ದೇವಮ್ಮ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.