ಮಹಿಳೆಯರು ಅಧಿಕಾರ ನಡೆಸುವಂತೆ ಆಗಲಿ
ಕೆ.ಆರ್. ನಗರ: ಪ್ರಸ್ತುತ ರಾಜಕೀಯ ವ್ಯವಸ್ಥೆ ಕಲುಷಿತಗೊಂಡಿದ್ದು, ಇದನ್ನು ಸರಿಪಡಿಸಲು ಮಹಿಳೆಯರು ಆಡಳಿತ ನಡೆಸುವಂತಾಗಬೇಕು. ಆದ್ದರಿಂದ ಮಹಿಳೆಯರು ರಾಜಕೀಯದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಮಹಿಳೆ ಇಂದಿರಾ ವಿದ್ಯಾರಣ್ಯ ಹೇಳಿದರು.
ಪಟ್ಟಣದ ಶಿವಾನುಭವ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಆಯೋಜಿಸಿದ್ದ ತಾಲೂಕು ಮಟ್ಟದ ಜ್ಞಾನ ವಿಕಾಸ ದಿನಾಚರಣೆ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪುರುಷ ಪ್ರಧಾನವಾದ ಸಮಾಜದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರದಲ್ಲೂ ಕರ್ತವ್ಯ ನಿರ್ವಹಿಸುತ್ತಿದ್ದರೂ ಶೇ.20 ರಷ್ಟು ಮಹಿಳೆಯರು ಇರುವುದನ್ನು ಕಾಣುತ್ತಿದ್ದು ಇದು ವಿಷಾದನೀಯ ಎಂದರು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ರತ್ನ, ಮಹಿಳಾ ಒಕ್ಕೂಟದ ಅಧ್ಯಕ್ಷೆ ಶೀಲಾ ಶಶಿಕುಮಾರ್, ಪ್ರಗತಿಪರ ಮಹಿಳೆ ಇಂದ್ರಮ್ಮ, ಗ್ರಾಮಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಬಿ. ಅಶೋಕ್ ಮಾತನಾಡಿದರು. ಪುರಸಭಾ ಸದಸ್ಯೆ ಹರ್ಷಲತಾ, ಗ್ರಾಮಾಭಿವೃದ್ಧಿ ಸಂಸ್ಥೆಯ ಗೀತಾ, ಜಯಶ್ರೀ, ಹರಿಣಾಕ್ಷಿ, ಶರಾವತಿ ಬಸಂತ್, ತಿಪ್ಪೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

