ಮೈಸೂರು

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Published On :

ಮೈಸೂರು: ಸರಸ್ವತಿಪುರಂ ಶ್ರೀ ಯೋಗಿ ನಾರೇಯಣ ಬಣಜಿಗ (ಬಲಿಜ) ಯುವಕ ಸಂಘದ ವತಿಯಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ 52 ಬಣಜಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು. ಮೈಸೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಎಚ್.ಎ. ವೆಂಕಟೇಶ್ ಮಾತನಾಡಿ, ಹೆಚ್ಚಿನ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಿಂದ ಬಂದವರಾಗಿದ್ದಾರೆ. ಅವರು ನಾನಾ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಎಷ್ಟೇ ಕಷ್ಟದಲ್ಲಿದ್ದರೂ ಅತಿ ಹೆಚ್ಚು ಅಂಕಗಳನ್ನು ಪಡೆಯುತ್ತ ಬಂದಿದ್ದಾರೆ. ಸ್ಪರ್ಧಾ ಪ್ರಪಂಚದಲ್ಲಿ ಒಂದು ಉತ್ತಮ ಬದುಕನ್ನು ಕಟ್ಟಿಕೊಳ್ಳಲು ತುಂಬಾ ಕಷ್ಟ. ನಾವು ಅವರಿಗೆ ಮಾನಸಿಕವಾಗಿ ಎಲ್ಲ ತರಹದಲ್ಲಿ ಧೈರ್ಯ ತುಂಬಬೇಕು. ಜೊತೆಗೆ ಇಂತಹ ಪುರಸ್ಕಾರಗಳಿಂದ ಅವರನ್ನು ಪ್ರೋತ್ಸಾಹಿಸುವುದರಿಂದ ಜೀವನದಲ್ಲಿ ಮುಂದೆ ಬರುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ತಿಳಿಸಿದರು. ಸಂಘದ ಅಧ್ಯಕ್ಷ ಎಂ. ನಾರಾಯಣ್ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.