ಬಿಎಸ್ಪಿಯಿಂದ ನಾಮಪತ್ರ ಸಲ್ಲಿಕೆ
ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಎಸ್ಪಿ ಅಭ್ಯರ್ಥಿಯಾಗಿ ಸಿ.ಮೋಹನ್ಕುಮಾರ್ ನಾಮಪತ್ರ ಸಲ್ಲಿಸಿದರು. ನಗರ ಬಿಎಸ್ಪಿ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಿ.ಮೋಹನ್ಕುಮಾರ್ ಈ ಹಿಂದೆ ಕೆ.ಆರ್. ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಮಾಯಾವತಿ ಅವರಿಗೆ ಉತ್ತರ ಭಾರತದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮತದಾರರೂ ಬಿಎಸ್ಪಿ ಪರ ವಾಲುತ್ತಿದ್ದಾರೆ. ಆದ್ದರಿಂದ ಈ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವುದಾಗಿ ಅಪರು ಸುದ್ದಿಗಾರರಿಗೆ ತಿಳಿಸಿದರು. ಬಿಎಸ್ಪಿ ಜಿಲ್ಲಾ ಸಂಚಾಲಕ ಶಿವ ಮಹದೇವ, ಭೀಮನಹಳ್ಳಿ ಸೋಮೇಶ್, ಪ್ರತಾಪ್, ಚಿಂಬ ಬಸವರಾಜು ಇದ್ದರು.
ದೂರುಗಳಿದ್ದಲ್ಲಿ ಸಲ್ಲಿಸಿ
ಮೈಸೂರು: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚತ್ತೀಸ್ಗಢ್ ತೋಟಗಾರಿಕಾ ಇಲಾಖೆಯ ನಿರ್ದೇಶಕರಾದ ಭುವನೇಶ್ ಯಾದವ್ (ಮೊ. 9448289201) ಅವರು ಸಾಮಾನ್ಯ ವೀಕ್ಷಕರಾಗಿ ನೇಮಕವಾಗಿರುತ್ತಾರೆ. ಇವರು ಬೆಳಗ್ಗೆ 9 ರಿಂದ 11ರವರೆಗೆ ಹಾಗೂ ಸಂಜೆ 7 ರಿಂದ 9ರವರೆಗೆ ಭಾರತೀಯ ಭಾಷಾ ಸಂಸ್ಥಾನದ ಅತಿಥಿಗೃಹದಲ್ಲಿ ಹಾಗೂ ಸಂಜೆ 4 ರಿಂದ 6 ರವರೆಗೆ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ಅವರನ್ನು ಸಂಪರ್ಕಿಸಬಹುದು.
ಜೆಡಿಎಸ್ ಪರ ಕೆಲಸ ಮಾಡಿ
ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಅಲ್ಪಸಂಖ್ಯಾತರು ಹೋರಾಟ ಮಾಡಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಜೀಜುಲ್ಲಾ ಕರೆ ನೀಡಿದರು. ಪಕ್ಷದ ಕಚೇರಿಯಲ್ಲಿ ನಡೆದ ಅಲ್ಪಸಂಖ್ಯಾತ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಹೊಸದಾಗಿ ನೇಮಕರಾದ ಕಾರ್ಯಕರ್ತರಿಗೆ ನೇಮಕಾತಿ ಪತ್ರ ವಿತರಿಸಿ ಅವರು ಮಾತನಾಡಿದರು. ಇದೇ ವೇಳೆ ನಗರಾಧ್ಯಕ್ಷ ರಾಜಣ್ಣ, ಕಾರ್ಯಾಧ್ಯಕ್ಷ ವೇಣುಗೋಪಾಲ್, ಟಿ.ದೇವರಾಜ್, ಪಿ. ಮಂಜುನಾಥ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

