ಮೈಸೂರು

ಟಿಕೆಟ್ ಸಿಗದ್ದರಿಂದ ಪಕ್ಷೇತರನಾಗಿ ಸ್ಪರ್ಧೆ: ಗುರುಮಲ್ಲೇಶ್

Published On :

ಮೈಸೂರು: ಜೆಡಿಎಸ್ನಲ್ಲಿ ಹಲವು ವರ್ಷಗಳ ಕಾಲ ದುಡಿದ ನನಗೆ ಎಚ್.ಡಿ. ದೇವೇಗೌಡರು ಟಿಕೆಟ್ ಕೊಡಲು ನಿರ್ಧರಿಸಿದ್ದರು. ಆದರೆ, ಸ್ಥಳೀಯ ಮುಖಂಡರು ನನ್ನ ಹೆಸರು ಹೇಳಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ ಎಂದು ಗುರುಮಲ್ಲೇಶ್ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಕೆಟ್ ವಂಚಿತನಾದ ನನಗೆ ಆಂತರಿಕವಾಗಿ ಬೇಸರವಿದ್ದರೂ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೆ. ನಂತರ ನಡೆದ ಬೆಳವಣಿಗೆಗಳಿಂದ ಬೇಸತ್ತು ಜೆಡಿಎಸ್ಗೆ ರಾಜಿನಾಮೆ ನೀಡಿದೆ. ಆದರೂ ವರಿಷ್ಠರು ರಾಜಿನಾಮೆ ಅಂಗೀಕರಿಸಿಲ್ಲ. ಆದರೆ  ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ.  ನಾನೊಂದು ದುಡಿಯುವ ಎತ್ತು. ದಯಮಾಡಿ ಈ ಕಾಡು ಮೃಗಗಳಿಂದ ಜನರು ನನ್ನನ್ನು ರಕ್ಷಿಸುತ್ತಾರೆ ನಂಬಿದ್ದೇನೆ ಎಂದರು. ಜೆಡಿಎಸ್ ಅಭ್ಯರ್ಥಿಯಾದ ಚಂದ್ರಶೇಖರಯ್ಯ ಅವರು ರಾಜಕಾರಣಕ್ಕೆ ಬರಬಾರದು. ಇಂದು ನ್ಯಾಯಾಂಗದ ಮೇಲೆ ಅಷ್ಟೋ ಇಷ್ಟೋ ಗೌರವ ಉಳಿದಿದೆ. ಇವರು ಬಂದು ಗೆದ್ದರೆ ಸಮಾಜದಲ್ಲಿ ನಡೆಯುವ ಭ್ರಷ್ಟಾಚಾರ, ಅಧಿಕಾರಿಗಳ ಲಂಚಗುಳಿತನವನ್ನು ನೋಡಿ ಸುಮ್ಮನಿರಬೇಕಾಗುತ್ತದೆ. ಅದರಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗಿ ನ್ಯಾಯಾಂಗ ವ್ಯವಸ್ಥೆ ಘನತೆ ಕಳೆದುಕೊಳ್ಳುವ ಸಾಧ್ಯತೆ ಇರುವುದರಿಂದ ಅವರು ನಾಮಪತ್ರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.