ಮೈಸೂರು

ಮಹಿಳೆಯರಿಗೆ ಸಿಗದ ಸಮಾನತೆ

Published On :

ಕೆ.ಆರ್. ನಗರ: ಮಹಿಳೆಯರಿಗೆ ಪೂರ್ಣ ಪ್ರಮಾಣದಲ್ಲಿ ಸಮಾನತೆ ದೊರೆತಿಲ್ಲ ಎಂದು ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರಕವಿಗಳ ಸ್ಮರಣಾರ್ಥ ಮೈಸೂರು ವಿವಿ ಮಟ್ಟದ ವಿದ್ಯಾರ್ಥಿ ಕವಿಗೋಷ್ಠಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹೆಣ್ಣಿನ ಮೇಲೆ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರಗಳು ದಿನೇ ದಿನೇ ಹೆಚ್ಚುತ್ತಿರುವುದನ್ನು ಕಾಣುತ್ತಿದ್ದೇವೆ. ತನ್ನ ತಾಯಿಗೆ ಮತ್ತು ಸಹೋದರಿಯರಿಗೆ ರಕ್ಷಣೆ ಬೇಕು ಎಂದು ಬಯಸುವ ಯುವಕರಿಂದಲೇ ಲೈಂಗಿಕ ಹಗರಣಗಳು ನಡೆಯುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಇಂತಹ ಹೀನ ಕೃತ್ಯಗಳು ನಡೆಯಲು ಅನಾಗರಿಕತನ ಕಾರಣವಾಗಿದೆ. ಆದ್ದರಿಂದ ಪ್ರತಿಯೊಬ್ಬರು ಶಿಕ್ಷಣವಂತರಾಗಿ ಆರೋಗ್ಯಕರ ಸಮಾಜ ನಿರ್ಮಾಣ ಮಾಡಬೇಕೆಂದು ಸಲಹೆ ನೀಡಿದರು.
ಪ್ರಾಂಶುಪಾಲ ಡಾ.ಎಂ.ಎಚ್. ಕೊಂಡರಸಯ್ಯ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ಮಾದಯ್ಯ, ಡಾ. ಅಪ್ಪಾಜಿಗೌಡ, ತಾಲೂಕು ಕಸಾಪ ಅಧ್ಯಕ್ಷ ಜಿ.ಕೆ.ರಾಜು, ಉಪನ್ಯಾಸಕರಾದ ಎಚ್.ಆರ್. ಚಂದ್ರಕಲಾ, ಕೆ.ಸಿ. ವೀರಭದ್ರಯ್ಯ, ಹರೀಶ್ಗೌಡ, ಮಲ್ಲಿಕಾರ್ಜುನಗೌಡ, ನಾಗೇಂದ್ರಕುಮಾರ್, ಉರಿಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.