ಮೈಸೂರು

ಚುನಾವಣಾ ಹೈಟೆಕ್ ಪ್ರಚಾರಕ್ಕೆ ಬಿಜೆಪಿ ಚಾಲನೆ

Published On :

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹೈಟೆಕ್ ಪ್ರಚಾರಕ್ಕೆ ಶುಕ್ರವಾರ ಎನ್.ಆರ್. ಮೊಹಲ್ಲಾದ ಮಾರುತಿ ವೃತ್ತದಲ್ಲಿ ಚಾಲನೆ ನೀಡಲಾಯಿತು. ಹೈಟೆಕ್ ವಾಹನದಲ್ಲಿ ದೊಡ್ಡ ಡಿಜಿಟಲ್ ಪರದೆ ಅಳವಡಿಸಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ದೇಶದ ವಿವಿಧೆಡೆ ಮಾಡಿದ ಭಾಷಣದ ತುಣುಕುಗಳನ್ನು ಬಿತ್ತರಿಸಲಾಯಿತು. ಡಿಜಿಟಲ್ ಪರದೆಯಲ್ಲಿ ಕಾಂಗ್ರೆಸ್ನ ಭ್ರಷ್ಟಾಚಾರ, ಎನ್ಡಿಎ ಸರ್ಕಾರದ ಸಾಧನೆ ಮತ್ತು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದರೆ ದೇಶದ ಅಭಿವೃದ್ಧಿಗೆ ಬಿಜೆಪಿ ನೀಡುವ ಕೊಡುಗೆ ಕುರಿತು ಜನರಿಗೆ ಮಾಹಿತಿ ನೀಡಲಾಯಿತು. ಎನ್.ಆರ್. ವಿಧಾನಸಭಾ ಕ್ಷೇತ್ರದ ವಿವಿಧೆಡೆ ಸಂಚರಿಸಿದ ಹೈಟೆಕ್ ವಾಹನ ಶನಿವಾರದಿಂದ ಚಾಮರಾಜ, ಚಾಮುಂಡೇಶ್ವರಿ, ಹುಣಸೂರು, ಪಿರಿಯಾಪಟ್ಟಣ, ಮಡಿಕೇರಿ, ವೀರಾಜಪೇಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಅಂತಿಮವಾಗಿ ಕೆ.ಆರ್. ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲಿದೆ.  ಈ ವೇಳೆ ಬಿಜೆಪಿ ನಗರಾಧ್ಯಕ್ಷ ಇ.ಮಾರುತಿರಾವ್ ಪವಾರ್, ಪ್ರಧಾನ ಕಾರ್ಯದರ್ಶಿ ವಿ. ಸೋಮಸುಂದರ್, ಎನ್.ಆರ್. ಕ್ಷೇತ್ರದ ಅಧ್ಯಕ್ಷ ಆನಂದ್, ಬಿಜೆಪಿ ಮುಖಂಡರಾದ ಬಿ.ಪಿ. ಮಂಜುನಾಥ್, ಜೋಗಿ ಮಂಜು, ರಮೇಶ್, ರಾಜು ಇದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.