ಚುನಾವಣಾ ಸಿಬ್ಬಂದಿಗೆ ತರಬೇತಿ
ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಜೆಎಸ್ಎಸ್ ಮಹಿಳಾ ಕಾಲೇಜು, ಮಹಾರಾಜ ಕಾಲೇಜು ಶತಮಾನೋತ್ಸವ ಭವನ ಮತ್ತು ಮಹಾರಾಣಿ ಕಾಲೇಜಿನಲ್ಲಿ ಶನಿವಾರ ಪಿಆರ್ಒ ಮತ್ತು ಎಪಿಆರ್ಒಗಳಿಗೆ ತರಬೇತಿ ನೀಡಲಾಯಿತು.
ಕೃಷ್ಣರಾಜ ವಿಧಾನಸಭಾ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುವವ ಸರ್ಕಾರಿ ನೌಕರರಿಗೆ ಜೆಎಸ್ಎಸ್ ಮಹಿಳಾ ಕಾಲೇಜಿನಲ್ಲಿ, ಚಾಮರಾಜ ಕ್ಷೇತ್ರದವರಿಗೆ ಮಹಾರಾಜ ಶತಮಾನೋತ್ಸವ ಭವನದಲ್ಲಿ ಮತ್ತು ನರಸಿಂಹರಾಜ ಕ್ಷೇತ್ರದವರಿಗೆ ಮಹಾರಾಣಿ ಮಹಿಳಾ ಕಾಲೇಜಿನಲ್ಲಿ ಮೊದಲ ಹಂತದ ತರಬೇತಿ ನೀಡಲಾಯಿತು.
ಮೂರು ಕ್ಷೇತ್ರಗಳಿಂದ ಸುಮಾರು 1200ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ಈ ತರಬೇತಿಯಲ್ಲಿ ಭಾಗವಹಿಸಿದ್ದರು. ಇಂದು ನಡೆದ ತರಬೇತಿಯಲ್ಲಿ ಪಿಆರ್ಒ ಮತ್ತು ಎಪಿಆರ್ಒಗಳಿಗೆ ಚುನಾವಣೆ ಹಿನ್ನೆಲೆಯಲ್ಲಿ ಮತದಾನದ ದಿನದಂದು ಅನುಸರಿಸಬೇಕಾದ ನಿಯಮ, ಎಲೆಕ್ಟ್ರಾನಿಕ್ ಮತಯಂತ್ರ ಬಳಕೆ ಕುರಿತು ಅರಿವು ಮೂಡಿಸಲಾಯಿತು.
ಏ. 10 ರಂದು ಎರಡನೆ ಹಂತದಲ್ಲಿ ಪಿಆರ್ಒ, ಎಪಿಆರ್ಒ ಮತ್ತು ಪೋಲಿಂಗ್ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು. ಅಂದು ಅಧಿಕಾರಿಗಳಿಗೆ ಫಾರಂ ನಂ. 12 ಮತ್ತು ಫಾರಂ 12ಎ ನೀಡಲಾಗುತ್ತದೆ. ಒಂದು ಅರ್ಜಿ ಪೋಸ್ಟಲ್ ಬ್ಯಾಲೆಟ್ಗೆ ಮತ್ತೊಂದು ಚುನಾವಣಾ ಕರ್ತವ್ಯಕ್ಕೆ ನೀಡಿ ಸಹಿ ಪಡೆಯಲಾಗುತ್ತದೆ ಎಂದು ನಗರ ಪಾಲಿಕೆ ಆಯುಕ್ತ ಪಿ.ಜಿ. ರಮೇಶ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

