ಮೈಸೂರು

ಮೈಸೂರು: ವಿವಿಧೆಡೆ ಜೆಡಿಎಸ್ ಅಭ್ಯರ್ಥಿ ಮತಯಾಚನೆ

Published On :

ಮೈಸೂರು: ಮೈಸೂರು- ಕೊಡಗು ಲೋಕಸಭಾ ಜೆಡಿಎಸ್ ಅಭ್ಯರ್ಥಿ ನ್ಯಾ. ಚಂದ್ರಶೇಖರಯ್ಯ  ಭಾನುವಾರ ನಗರದ ವಿವಿಧ ಬಡಾವಣೆಗಳಿಗೆ ತೆರಳಿ ಮತಯಾಚಿಸಿದರು.
ಬೆಳಗ್ಗೆ ಮಹಾತ್ಮಗಾಂಧಿ ರಸ್ತೆಯಲ್ಲಿರುವ ತರಕಾರಿ ಮಾರುಕಟ್ಟೆಗೆ ತೆರಳಿ ವ್ಯಾಪಾರಸ್ಥರು ಹಾಗೂ ಗ್ರಾಹಕರನ್ನು ಭೇಟಿಯಾದರು. ತಾವು ಜೆಡಿಎಸ್‌ನಿಂದ ಸ್ಪರ್ಧಿಸಿದ್ದು ಈ ಬಾರಿ ತಮಗೆ ಮತ ನೀಡುವಂತೆ ಕೋರಿದರು.
ನಂತರ ಅಗ್ರಹಾರ, ನಂಜುಮಳಿಗೆ, ಜಯನಗರ, ಅಶೋಕಪುರಂ, ಕುವೆಂಪುನಗರ, ಶ್ರೀರಾಂಪುರ, ದೇವಯ್ಯನಹುಂಡಿ, ಚಿಕ್ಕಹರದನಹಳ್ಳಿಯಲ್ಲಿ ಪಾದಯಾತ್ರೆ ನಡೆಸಿದರು.
ಮತಯಾಚನೆ ಸಂದರ್ಭದಲ್ಲಿ ಶಾಸಕರಾದ ಜಿ.ಟಿ. ದೇವೇಗೌಡ, ಸಾ.ರಾ. ಮಹೇಶ್, ಜೆಡಿಎಸ್ ಮಹಿಳಾ ವಿಭಾಗದ ಅಧ್ಯಕ್ಷೆ ಪಿ.ಎಸ್. ಸುಜಾತ ದುರ್ಗೇಶ್, ಉಪ ಮೇಯರ್ ವಿ. ಶೈಲೇಂದ್ರ, ನಗರಾಧ್ಯಕ್ಷ ರಾಜಣ್ಣ, ಬಂಗಾರಪ್ಪ ಬ್ಲಾಕ್ ಅಧ್ಯಕ್ಷೆ ತೇಜಮಣಿ, ವಕ್ತಾರ ಎಸ್‌ಬಿಎಂ ಮಂಜು, ಎಂ. ಸರೋಜಮ್ಮ ಮತ್ತಿತರರು ಇದ್ದರು.

 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.