'ಎಲ್ಲ ವರ್ಗದ ಬಡವರಿಗೆ ಅನುಕೂಲ'
ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಲವಾರು ಜನಪರ ಕಾರ್ಯಕ್ರಗಳನ್ನು ತಂದಿದ್ದು, ಇದರಿಂದ ಎಲ್ಲ ಜಾತಿಯ ಬಡವರಿಗೆ ಅನುಕೂಲವಾಗಿದೆ ಎಂದು ಮಾಜಿ ಶಾಸಕ ಎಂ. ಸತ್ಯನಾರಾಯಣ ಅಭಿಪ್ರಾಯಪಟ್ಟರು.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ರಮ್ಮನಹಳ್ಳಿಯಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಎಚ್. ವಿಶ್ವನಾಥ್ ಪರವಾಗಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಎಲ್ಲರಿಗೂ ಅನುಕೂಲ ಮಾಡಿಕೊಟ್ಟಿರುವ ಕಾಂಗ್ರೆಸ್ ಬೆಂಬಲಿಸಬೇಕು
ಎಂದು ಮನವಿ ಮಾಡಿದರು.
ಕೆಪಿಸಿಸಿ ಸದಸ್ಯ ಕೆ. ಮರೀಗೌಡ ಮಾತನಾಡಿ, ರಮ್ಮನಹಳ್ಳಿಯಲ್ಲಿ ಪ್ರೌಢಶಾಲೆ, ಆಸ್ಪತ್ರೆ, ಗರಡಿಮನೆ, ಒಳಚರಂಡಿ, ವಿದ್ಯುತ್ ಇತರೆ ಸಮಸ್ಯೆಗಳನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಬಗೆಹರಿಸಲಾಗುವುದು ಎಂದರು.ಜಿಪಂ ಅಧ್ಯಕ್ಷ ಕೂರ್ಗಳ್ಳಿ ಎಂ. ಮಹದೇವು, ಸದಸ್ಯೆ ಶಕುಂತಲಾ ವೆಂಕಟಯ್ಯ, ಇಲವಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಕೆ. ಬಸವಣ್ಣ, ಮುಖಂಡರಾದ ಮೆಲ್ಲಹಳ್ಳಿ ಮಹದೇವಸ್ವಾಮಿ, ಕೆ. ಸಾಲುಂಡಿ ಪ್ರಭುಸ್ವಾಮಿ, ಲಿಂಗಮ್ಮಣ್ಣಿ, ಬಸಪ್ಪ, ನಾಗರಾಜು, ಚಿಕ್ಕಣ್ಣೇಗೌಡ, ಗ್ರಾಪಂ ಉಪಾಧ್ಯಕ್ಷ ಮಂಜುನಾಥ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

