ಮೈಸೂರು

ನೀರಿಗೆ ಆಗ್ರಹಿಸಿ ಕಾಡಾ ಕಚೇರಿ ಮುತ್ತಿಗೆ

Published On :

ಮೈಸೂರು: ಕಬಿನಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಲು ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದವರು ಕಾಡಾ ಕಚೇರಿಗೆ ಶನಿವಾರ ಮುತ್ತಿಗೆ ಹಾಕಿದ್ದು, ಸಂಜೆಯ ನಂತರವು ತಮ್ಮ ಹೋರಾಟ ಮುಂದುವರೆಸಿದ್ದಾರೆ.
ಕಬಿನಿ ಜಲಾಶಯದಲ್ಲಿ ನೀರು ಇದೆ. ನದಿಗೆ ನೀರು ಬಿಡುತ್ತಿರುವ ನೀರಾವರಿ ಇಲಾಖೆ ಅಧಿಕಾರಿಗಳು ಕಾಲುವೆಗಳಿಗೆ ನೀರು ಹರಿಸುತ್ತಿಲ್ಲ. ಕಳೆದ 2 ತಿಂಗಳಿಂದ ಕಾಲುವೆಗಳಿಗೆ ನೀರು ಬಿಡುವಂತೆ ಮನವಿ ಸಲ್ಲಿಸಿದ್ದೇವೆ. 2- 3 ಬಾರಿ ನೀರು ಬಿಡುವುದಾಗಿ ಹೇಳಿದ ಅಧಿಕಾರಿಗಳು ನಂತರ ಮಾತು ತಪ್ಪಿಸಿದ್ದಾರೆ.
ಇದರಿಂದ ಆಕ್ರೋಶಗೊಂಡ ರೈತರು, ನೀರಾವರಿ ಇಲಾಖೆ ಮುಖ್ಯ ಎಂಜಿನಿಯರ್ ಶಿವಶಂಕರ್, ಅಧೀಕ್ಷಕ ಎಂಜಿನಿಯರ್ ಶಿವಮೂರ್ತಿ ಕಚೇರಿಗೆ ಮುತ್ತಿಗೆ ಹಾಕಿದ್ದು, ಸಂಜೆಯ ನಂತರವು ಪ್ರತಿಭಟನೆ ಮುಂದುವರೆಸಿದ್ದಾರೆ.
ಎಂಜಿನಿಯರ್‌ಗೆ ದಿಗ್ಬಂಧನ: ಮುಖ್ಯ ಎಂಜಿನಿಯರ್ ಶಿವಶಂಕರ್ ಅವರನ್ನು ಕಚೇರಿಯೊಳಗೆ ರೈತರು ದಿಗ್ಭಂಧನ ಹಾಕಿದ್ದಾರೆ.ನೀರು ಬಿಡುವವರೆಗೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಎಚ್ಚರಿಸಿದ್ದಾರೆ.
ಮುಖಂಡರಾದ ಅತ್ತಹಳ್ಳಿ ದೇವರಾಜ್, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಕಿರಗೊಂಸೂರು ಶಂಕರ್ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.  




Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.