ಮೈಸೂರು

ಶಾಲಾ- ಕಾಲೇಜಲ್ಲಿ ಮತಯಾಚನೆ ಇಲ್ಲ; ಪ್ರಚಾರ ಮತ್ತಷ್ಟು ಬಿಗಿ

Published On :

ಮೈಸೂರು:  ಮಂಗಳವಾರದಿಂದ ಪ್ರತಿ ಮೂರು ದಿನಗಳಿಗೊಮ್ಮೆ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಅಭ್ಯರ್ಥಿಗಳ ಲೆಕ್ಕಪತ್ರ ಪರಿಶೀಲಿಸಲಾಗುವುದು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ನಡೆದ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ. ಶಿಖಾ ಮಾಹಿತಿ ನೀಡಿದರು.
ಏ. 1ರ ಬೆಳಗ್ಗೆ 11 ರಿಂದ 12 ಗಂಟೆವರೆಗೆ ಲೆಕ್ಕಪತ್ರಗಳನ್ನು ಪರಿಶೀಲಿಸಲಾಗುವುದು. ನಾಮಪತ್ರ ಸಲ್ಲಿಕೆ ದಿನದಿಂದ ಈವರೆಗೆ ಎಲ್ಲಾ ಲೆಕ್ಕಗಳನ್ನು ಪರಿಶೀಲಿಸಿ ಒಪ್ಪಿಸಬೇಕು. ಶೈಕ್ಷಣಿಕ ಸಂಸ್ಥೆಗಳಲ್ಲಿ, ಕಾಲೇಜುಗಳಲ್ಲಿ ಚುನಾವಣಾ ಪ್ರಚಾರಕ್ಕೆ ಅವಕಾಶ ಇರುವುದಿಲ್ಲ.
 ನಗರ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯಗಳಿಗೆ ಅನುಮತಿ ನೀಡಲು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಏಕಗವಾಕ್ಷಿ ವ್ಯವಸ್ಥೆ ಆರಂಭಿಸಲಾಗಿದೆ. ಉಳಿದಂತೆ ತಾಲೂಕು ಕೇಂದ್ರಗಳಲ್ಲಿ ಆಯಾ ತಾಲೂಕು ಕಚೇರಿಯಿಂದ ಪ್ರಚಾರಕ್ಕೆ ಅನುಮತಿ ಪಡೆಯಬಹುದು ಎಂದರು.
ಪ್ರಚಾರ ಕಾರ್ಯಕ್ಕೆ ಅನುಮತಿ ಪಡೆಯುವಾಗ ರಾಜಕೀಯ ಪಕ್ಷಗಳ ಬ್ಲಾಕ್ ಅಧ್ಯಕ್ಷರ ಹುದ್ದೆಗಿಂತ ಕೆಳಗಿನವರು ಅರ್ಜಿ ಸಲ್ಲಿಸುವಂತಿಲ್ಲ. ಪಕ್ಷದ ಲೆಡರ್‌ಹೆಡ್‌ನಲ್ಲಿಯೆ ಅನುಮತಿಗಾಗಿ ಅರ್ಜಿ ಸಲ್ಲಿಸಬೇಕು. ಚುನಾವಣಾ ಪ್ರಚಾರದ ವೇಳೆ ಕಾರ್ಯಕರ್ತರಿಗೆ, ಸಾರ್ವಜನಿಕರಿಗೆ ಎಳನೀರು, ಮಜ್ಜಿಗೆ ಹಾಗೂ ನೀರು ಹೊರತುಪಡಿಸಿ ಇತರೆ ಆಹಾರ ಪದಾರ್ಥ ವಿತರಿಸುವಂತಿಲ್ಲ ಎಂದು ಸ್ಪಷ್ಟಪಡಿಸಿದರು.
ಸಭೆಯಲ್ಲಿ ಚುನಾವಣಾ ವೆಚ್ಚ ವೀಕ್ಷಕರಾದ ಜೀತೇಂದ್ರಯಾದವ್, ಸಾಮಾನ್ಯ ವೀಕ್ಷಕರಾದ ಭುವನೇಶ್ ಯಾದವ್, ನಗರ ಪೊಲೀಸ್ ಆಯುಕ್ತ ಎಂ.ಎ. ಸಲೀಂ, ಎಸ್ಪಿ ಅಭಿನವ್‌ಖರೆ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕಾಪಸಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.