ಮೈಸೂರು

ತಲೆಬಾಗಿತು ಜಗಜ್ಯೋತಿಗೆ

Published On :

ಕ.ಪ್ರ.ವಾರ್ತೆ | ಮೈಸೂರು |ಮೇ 2
ಸಮಾನತೆಯ ಹರಿಕಾರ ಕ್ರಾಂತಿಯೋಗಿ ಬಸವೇಶ್ವರ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ವೀರಶೈವ ಸಂಘಸಂಸ್ಥೆಗಳ ಒಕ್ಕೂಟದಿಂದ ಶುಕ್ರವಾರ ಆಚರಿಸಲಾಯಿತು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಬಸವಣ್ಣನ ಪ್ರತಿಮೆಗೆ ಜಿಲ್ಲಾಧಿಕಾರಿ ಸಿ.ಶಿಖಾ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಶಾಸಕರಾದ ಎಂ.ಕೆ ಸೋಮಶೇಖರ್, ಜಿ.ಟಿ. ದೇವೇಗೌಡ, ತನ್ವೀರ್ ಸೇಠ್, ಉಪಮೇಯರ್ ವಿ. ಶೈಲೇಂದ್ರ, ಮೈಲ್ಯಾಕ್ ಮಾಜಿ ಅಧ್ಯಕ್ಷೆ ಮಲ್ಲಿಗೆ ವೀರೇಶ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಎಚ್.ವಿ. ರಾಜೀವ್, ಪ್ರಾದೇಶಿಕ ಆಯುಕ್ತೆ ಎಂ.ವಿ.ಜಯಂತಿ, ನಗರ ಪಾಲಿಕೆ ಆಯುಕ್ತ ಪಿ.ಜಿ. ರಮೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲಾ ಮಠಪತಿ ಮತ್ತಿತರರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಕೆ.ಸೋಮಶೇಖರ್, ಬಸವಣ್ಣ ಸಮಾಜದ ಹರಿಕಾರ, ಸಮಾನತೆಯ ಸಮಾಜಕ್ಕಾಗಿ ದುಡಿದ ಅವರ ವ್ಯಕ್ತಿತ್ವದ ಆದರ್ಶಗಳನ್ನು ಎಲ್ಲರೂ ತಮ್ಮ ಬದುಕಿಗೆ ಅಳವಡಿಸಿಕೊಳ್ಳಬೇಕು ಎಂದರು.
ಶಾಸಕ ತನ್ವೀರ್ ಸೇಠ್ ಮಾತನಾಡಿ, ಸಮಾಜದಲ್ಲಿ ವಚನಗಳು ಪರಿಣಾಮಕಾರಿಯಾಗಿ ಬದಲಾವಣೆ ತಂದಿವೆ. ಬಸವಣ್ಣವರ ತತ್ವಗಳು ಇಂದಿಗೂ ಆದರ್ಶನೀಯ ಎಂದು  ಸ್ಮರಿಸಿದರು.
ಸಚಿವರಿಂದ ಗೌರವ: ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಜಯಂತಿ ಮಹೋತ್ಸವವನ್ನು ಸರಳವಾಗಿ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸ ಪ್ರಸಾದ್, ಸಹಕಾರ ಸಚಿವ ಎಚ್.ಎಸ್. ಮಹದೇವ ಪ್ರಸಾದ್ ಬಸವಣ್ಣನವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷ ಕೂರ್ಗಳ್ಳಿ ಮಹದೇವು, ಬಣಭೂಮಿ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಕೆ.ಆರ್. ಮೋಹನ್‌ಕುಮಾರ್ ಮತ್ತಿತರು ಇದ್ದರು.
ವೀರಶೈವ ಸಮುದಾಯದ ಸಂಭ್ರಮ: ಅಖಿಲ ಭಾರತ ವೀರಶೈವ ಮಹಾಸಭಾ ಬಸವ ಬಳಗಗಳ ಹಾಗೂ ವೀರಶೈವ ಸಂಘ ಸಂಸ್ಥಗಳ ಒಕ್ಕೂಟವು ಶುಕ್ರವಾರ ಗನ್‌ಹೌಸ್ ಮುಂಭಾಗದಲ್ಲಿ ಬಸವ ಜಯಂತಿ ಆಚರಿಸಿತು.
ಧ್ವಜಾರೋಹಣ ನೆರೆವೇರಿಸುವ ಮೂಲಕ ಹೊಸಮಠದ ಅಧ್ಯಕ್ಷ ಚಿದಾನಂದ ಸ್ವಾಮೀಜಿ ಚಾಲನೆ ನೀಡಿದರು. ಬರಡನಪುರ ಮಠದ ಪರಮಶಿವಮೂರ್ತಿ ಸ್ವಾಮೀಜಿ, ಕುದೇರು ಮಠದ ಗುರುಶಾಂತ ಸ್ವಾಮೀಜಿ, ಜಿಪಂ ಮಾಜಿ ಅಧ್ಯಕ್ಷ ಪುಟ್ಟಬುದ್ದಿ, ಮಾಜಿ ಮೇಯರ್ ದಕ್ಷಿಣಾಮೂರ್ತಿ, ನಗರ ಪಾಲಿಕೆ ಸದಸ್ಯ ಬಿ.ವಿ. ಮಂಜನಾಥ್, ಜೆಎಸ್‌ಎಸ್ ಕಾರ್ಯದರ್ಶಿಗಳಾದ ಎಸ್.ಪಿ. ಮಂಜುನಾಥ್, ಎನ್.ಶಿವಕುಮಾರ ಸ್ವಾಮಿ, ಒಕ್ಕೂಟದ ಅಧ್ಯಕ್ಷ ಎಚ್.ವಿ.ಬಸವರಾಜು, ಬಸವ ಜಯಂತಿ ಮಹೋತ್ಸವ ಸಮಿತಿ ಅಧ್ಯಕ್ಷ ಕೆ.ನಾಗರಾಜ್, ಸ್ವಾಗತ ಸಮಿತಿ ಅಧ್ಯಕ್ಷ ಬಿ.ಎ ಮಧುಕರ್, ಪ್ರಧಾನ ಸಂಚಾಲಕ ಮೂಗೂರು ನಂಜುಂಡಸ್ವಾಮಿ, ತಾಲೂಕು ಅಧ್ಯಕ್ಷ ರುದ್ರಸ್ವಾಮಿ ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.