ಡಾ. ಮಹದೇವಪ್ಪಗೆ ಅಭಿನಂದನೆ
ಕ.ಪ್ರ.ವಾರ್ತೆ | ಮೈಸೂರು | ಮೇ 2
ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘ ಆಯೋಜಿಸಿದ್ದ ಡಾ.ಶಿವಕುಮಾರಸ್ವಾಮಿಗಳ 107ನೇ ವರ್ಷದ ಗುರುವಂದನಾ ಕಾರ್ಯಕ್ರಮ ಮತ್ತು ಬಸವ ಜಯಂತಿ ಕಾರ್ಯಕ್ರಮದಲ್ಲಿ ಪದ್ಮವಿಭೂಷಣ ಡಾ.ಎಂ. ಮಹದೇವಪ್ಪ ಅವರನ್ನು ಸನ್ಮಾನಿಸಲಾಯಿತು.
ಕುವೆಂಪುನಗರ ಬಸ್ ನಿಲ್ದಾಣದಲ್ಲಿ ಮೈಸೂರು ನಗರ, ಗ್ರಾಮಾಂತರ, ಚಾಮರಾಜನಗರ ಮತ್ತು ಮಂಡ್ಯ ವಿಭಾಗದ ಕೆಸ್ಸಾರ್ಟಿಸಿ ನೌಕರರ ಸಂಘದವರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹದೇವಪ್ಪ ಅವರನ್ನು ಮಾಜಿ ಸಚಿವ ವಿ.ಸೋಮಣ್ಣ ಆತ್ಮೀಯವಾಗಿ ಅಭಿನಂದಿಸಿದರು. ಅಂತೆಯೇ ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕ್ನ ಹಾಲಿ ಅಧ್ಯಕ್ಷೆ ಡಾ.ಎಂ.ವಿ. ಬೃಹದಾಂಬ, ಗೈಡ್ಸ್ನಲ್ಲಿ ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತೆ ಬಿ. ಚಂದನ ಅವರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಜೆಎಸ್ಎಸ್ ಕಾಲೇಜು ಅರ್ಥಶಾಸ್ತ್ರ ಪ್ರಾಧ್ಯಾಪಕ ಡಿ.ಎಸ್. ಸದಾಶಿವಮೂರ್ತಿ ಅವರು ಉಪನ್ಯಾಸ ನೀಡಿ ಮಾತನಾಡಿ, ಬಸವ ಜಯಂತಿಯ ಈ ಸಂದರ್ಭದಲ್ಲಿ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇಡೀ ಜಗತ್ತಿಗೆ ಕಾಯಕದ ಸಂದೇಶ ಸಾರಿದ ಬಸವಣ್ಣನವರ ತತ್ವಾದರ್ಶಗಳನ್ನು ನಾವು ಪಾಲಿಸಬೇಕು ಎಂದು ಕರೆ ನೀಡಿದರು.
ಮಾಜಿ ಸಚಿವ ವಿ.ಸೋಮಣ್ಣ ಕಾರ್ಯಕ್ರಮ ಉದ್ಘಾಟಿಸಿ, ಬಸವೇಶ್ವರರ ಭಾವಚಿತ್ರ ಅನಾವರಣಗೊಳಿಸಿದರು. ಅಖಿಲ ಭಾರತ ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ಎಚ್.ಬಿ. ಬಸವರಾಜು ಹಿನಕಲ್, ಜಿಪಂ ಮಾಜಿ ಅಧ್ಯಕ್ಷ ಕೆ.ಎನ್. ಪುಟ್ಟಬುದ್ದಿ, ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷ ಕೆ.ನಾಗರಾಜು, ಪಾಲಿಕೆ ಮಾಜಿ ಸದಸ್ಯ ಪ್ರದೀಪ್ಕುಮಾರ್, ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಹಂಪಯ್ಯ, ಮಹಾಸಭಾದ ಜಿಲ್ಲಾ ಯುವ ಘಟಕದ ಅಧ್ಯಕ್ಷ ಎಂ.ಎಚ್.ಚಂದ್ರಶೇಖರ್ ಮಾರ್ಬಳ್ಳಿ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಚ್.ವಿ.ರಾಜೀವ್, ಉದ್ಯಮಿ ಯು.ಎಸ್. ಶೇಖರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

