ಮೂವರು ಪೌರಕಾರ್ಮಿಕರಿಗೆ ಸನ್ಮಾನ
ಕ.ಪ್ರ.ವಾರ್ತೆ ಮೈಸೂರು ಮೇ 2
ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆಯ ಮೂವರು ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು.
ಜೆಡಿಎಸ್ನ ಕೃಷ್ಣರಾಜ ಕ್ಷೇತ್ರದ ಎಸ್.ಬಂಗಾರಪ್ಪ ಬ್ಲಾಕ್ ವತಿಯಿಂದ ಇಲ್ಲಿನ ವಾರ್ಡ್ ಸಂಖ್ಯೆ 36 ರಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲಿಕೆಯ ಕಾಯಂ ಪೌರಕಾರ್ಮಿಕರಾದ ಚಿನ್ನಸ್ವಾಮಿ, ನಾಗಮ್ಮ ಹಾಗೂ ಆಂಜನಮ್ಮ ಅವರನ್ನು ಸನ್ಮಾನಿಸಲಾಯಿತು.
ಮುಖ್ಯ ಅತಿಥಿಯಾಗಿ ಮಾತನಾಡಿದ ಪಾಲಿಕೆ ಸದಸ್ಯ ಪಿ.ಪ್ರಶಾಂತ ಗೌಡ, ಕಾರ್ಮಿಕರ ದಿನಾಚರಣೆ ಸಂದರ್ಭದಲ್ಲಿ ಪೌರಕಾರ್ಮಿಕರನ್ನು ಸನ್ಮಾನಿಸುವ ಮೂಲಕ ಆ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಇದರಿಂದ ಪೌರ ಕಾರ್ಮಿಕರನ್ನು ಗುರುತಿಸುವ ಕೆಲಸ ಸಮಾಜದಿಂದ ಆಗುತ್ತಿದೆ ಎಂದರು.
ಜೆಡಿಎಸ್ ನಗರಾಧ್ಯಕ್ಷ ರಾಜಣ್ಣ, ಬಂಗಾರಪ್ಪ ಬ್ಲಾಕ್ ಅಧ್ಯಕ್ಷ ಬಿ.ಜಿ. ಸಂತೋಷ್, ಕೃಷ್ಣರಾಜ ಬ್ಲಾಕ್ ಜೆಡಿಎಸ್ ಅಧ್ಯಕ್ಷ ಎಂ.ಬಸವರಾಜು, ಮುಖಂಡರಾದ ನಾಗರಾಜು, ಮಹದೇವ, ಹರೀಶ್ಕುಮಾರ್, ರಾಜೀವ್, ಸಿಬ್ಬಂದಿ ಸಿದ್ದಪ್ಪ, ಪರಮೇಶ್, ಸಿದ್ದಮ್ಮ, ಪಳನಿಸ್ವಾಮಿ, ಬಾಲು, ಶಂಕರ್, ರವಿ. ದೊರೆಸ್ವಾಮಿ ಭಾಗವಹಿಸಿದ್ದರು. ಎಲ್ಲರಿಗೂ ಸಿಹಿ ವಿತರಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

